ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಮೈಸೂರು ವಿಶ್ವವಿದ್ಯಾನಿಲಯ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆರೋಗ್ಯವಂತ ನಗರಿಯನ್ನಾಗಿ ರೂಪಿಸುವ ಸದಾಶಯದೊಂದಿಗೆ ‘ಫಿಟ್ ಮೈಸೂರು-ಸಾಮೂಹಿಕ ಆರೋಗ್ಯ ಹಾಗೂ ಜಾಗೃತಿ ನಡಿಗೆಗೆ’ ಮಾನಸ ಗಂಗೋತ್ರಿಯ ಬಯಲು ರಂಗಮಂದಿರಲ್ಲಿ ಚಾಲನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಸೋಮವಾರಪೇಟೆ | ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆ

ನಡಿಗೆಯಲ್ಲಿ ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, , ಸಿ.ಎನ್. ಮಂಜೇಗೌಡ, ಶಾಸಕ ಶ್ರೀವತ್ಸ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಲೋಕನಾಥ್, ಕುಲಸಚಿವೆ ಎಂ.ಕೆ. ಸವಿತಾ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಸೇರಿದಂತೆ ಹಲವರು ಇದ್ದರು.





