ಬೀದರ್ | ಐದು ಆಂಬುಲೆನ್ಸ್ ಲೋಕಾರ್ಪಣೆ ಮಾಡಿದ ಶಾಸಕ ಪ್ರಭು ಚವ್ಹಾಣ

Date:

ಔರಾದ(ಬಿ) ಕ್ಷೇತ್ರದ ದಾಬಕಾ, ಕಮಲನಗರ, ಠಾಣಾ ಕುಶನೂರ, ಹೆಡಗಾಪೂರ ಹಾಗೂ ಔರಾದ ಆರೋಗ್ಯ ಕೇಂದ್ರಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ₹90 ಲಕ್ಷ ಅನುದಾನದಲ್ಲಿ ಹೊಸ ಆಂಬುಲೆನ್ಸ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ‌ ಕ್ಷೇತ್ರದ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.

ಔರಾದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ಐದು ಹೊಸ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದ ಅಭಿವೃದ್ಧಿ ನನ್ನ ಆದ್ಯತೆಗಳಲ್ಲಿ ಪ್ರಮುಖವಾಗಿದೆ. ಈ ದಿಶೆಯಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇಲಾಖೆಯ ಎಲ್ಲ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕ್ಷೇತ್ರದ ಎಲ್ಲ ಕಡೆಗಳಲ್ಲಿ ಉತ್ತಮ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಹಲವೆಡೆ ಆಂಬ್ಯುಲೆನ್ಸ್ ಗಳು ಕೆಲಸ ಮಾಡುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಆಂಬುಲೆನ್ಸ್ ವಾಹನಗಳನ್ನು ಖರೀದಿಸಲಾಗಿದೆ ಎಂದರು.

ವೈದ್ಯಾಧಿಕಾರಿಗಳು ಆಂಬ್ಯುಲೆನ್ಸ್‌ಗಳು ಸರಿಯಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ತುರ್ತು ಸಂದರ್ಭದಲ್ಲಿ ಮಾತ್ರ ಜನತೆ ಆಂಬುಲೆನ್ಸ್‌ಗಳಿಗೆ ಕರೆ ಮಾಡುತ್ತಾರೆ. ತ್ವರಿತವಾಗಿ ವಾಹನ ಸ್ಥಳಕ್ಕೆ ತಲುಪಿದಾಗ ಮಾತ್ರ ರೋಗಿಯ ಪ್ರಾಣ ಉಳಿಯಲು ಸಾಧ್ಯ. ಹಾಗಾಗಿ ಆಂಬ್ಯುಲೆನ್ಸ್‌ಗಳು ಸಮರ್ಪಕ ಸೇವೆ ಒದಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂಬ್ಯುಲೆನ್ಸ್ ವಾಹನ ಚಾಲಕರು ಕರ್ತವ್ಯ ಲೋಪ ಎಸಗಿರುವ ಘಟನೆಗಳು ಕೆಲವೆಡೆ ನಡೆದಿವೆ. ಅದಕ್ಕೆ ಆಸ್ಪದ ಕೊಡಬಾರದು. ಯಾವುದೇ ರೀತಿಯ ದುಷ್ಚಟಗಳಿಲ್ಲದವರಿಗೆ ಜವಾಬ್ದಾರಿ ವಹಿಸಬೇಕು. ವೈದ್ಯರು ಕೂಡ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಜೀವ ಉಳಿಸಬೇಕು. ಎಲ್ಲರೂ ಸಮಯ ಪಾಲನೆ ಮಾಡಬೇಕು. ಆಸ್ಪತ್ರೆಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ನರ್ಮ್ ಬಸ್‌ ಸೇವೆ ಪುನಾರಂಭಕ್ಕೆ ಒತ್ತಾಯ

ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ

ಇದೇ ವೇಳೆ ಶಾಸಕರು ಆಸ್ಪತ್ರೆಯ ವಿವಿಧ ವಾರ್ಡ್ ಗಳಲ್ಲಿ ಸುತ್ತಾಡಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿಯಾಗಿ ವೈದ್ಯರು ಹೇಗೆ ಕೆಲಸ ಮಾಡುತ್ತಿದ್ದಾರೆ ?, ಚಿಕಿತ್ಸೆ ಸರಿಯಾಗಿ ನೀಡುತ್ತಿದ್ದಾರೆಯೇ ? ಎಂದು ಪ್ರಶ್ನಿಸುವ ಮುಲಕ ವೈದ್ಯರು ಮತ್ತು ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದರು.

ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಮತ್ತು ಸಿಬ್ಬಂದಿ ಆತ್ಮೀಯತೆಯಿಂದ ವ್ಯವಹರಿಸಬೇಕು. ವೈದ್ಯರು ಸರಿಯಾಗಿ ಮಾತನಾಡಿಸಿ ಧೈರ್ಯ ತುಂಬಿದಲ್ಲಿ ತುಂಬಾ ಆತಂಕದಲ್ಲಿರುವ ರೋಗಿಗಳ ಅರ್ಧ ಸಮಸ್ಯೆ ನಿವಾರಣೆಯಾಗುತ್ತದೆ. ಆಸ್ಪತ್ರೆಯಲ್ಲಿ ಕೆಲಸ ಸರಿಯಾಗಿ ಆಗುತ್ತಿದೆ. ಆದರೆ ಪ್ರೀತಿ ಕಡಿಮೆಯಾಗುತ್ತಿದೆ ಎಂದೆನಿಸುತ್ತಿದೆ. ಹಾಗಾಗಿ ಕೆಲಸದ ಜೊತೆಗೆ ರೋಗಿಗಳನ್ನು ಪ್ರೀತಿಯಿಂದ ಚಿಕಿತ್ಸೆ ನೀಡಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ ರಮಣ್ ಪೋಕಲವಾರ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ದೊಂಡಿಬಾ ನರೋಟೆ, ಶರಣಪ್ಪ ಪಂಚಾಕ್ಷರಿ, ಸಂತೋಷ ಪೋಕಲವಾರ, ಕೇರಬಾ ಪವಾರ, ಪ್ರತೀಕ್ ಚವ್ಹಾಣ, ಸಚಿನ ರಾಠೋಡ್ ಹಾಗೂ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...