ಮಡಿಕೇರಿ | ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ವೃದ್ಧಿ: ಶಾಸಕ ಮಂತರ್ ಗೌಡ

Date:

ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ಸಂಬಂಧ ವೃದ್ಧಿಯಾಗಲಿದೆ. ಸಮುದಾಯಗಳು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು.

ಮಡಿಕೇರಿಯಲ್ಲಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಚಿಲ್ಲಿ ಬಾಯ್ಸ್ ಮಡಿಕೇರಿ ಆಯೋಜಿಸಿದ್ದ ಇಪ್ಪತ್ತನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, “ಇತ್ತೀಚೆಗೆ ಯುವಜನರು ಮಾದಕ ವ್ಯಸನ ಇನ್ನಿತರ ದುಶ್ಚಟಗಳಿಗೆ ಬಲಿಯಾಗುತ್ತಿರುವ ಸಂದರ್ಭದಲ್ಲಿ ಅವರಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಕ್ರೀಡೆಗಳು ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ. ಆಟದಲ್ಲಿ ಸೋಲು ಗೆಲುವು ಸಾಮಾನ್ಯ ಆದರೆ ಭಾಗವಹಿಸುವಿಕೆ ಮುಖ್ಯ” ಎಂದರು.

ಗ್ರಾಮ ಪಂಚಾಯತಿ ಸದಸ್ಯ ಶುಂಟಿಕೊಪ್ಪದ ಅಬ್ದುಲ್ ಲತೀಫ್ ಮಾತನಾಡಿ, “ಕೊಡಗು ಮುಸ್ಲಿಮ್ ಕಪ್ ಸಂಘಟನೆಯು ಎರಡು ಭಾಗವಾಗಿ ಹೋಗಿದ್ದು ದುರದೃಷ್ಟಕ. ಎಲ್ಲರೂ ಒಟ್ಟಾಗಿ ಸಂಘಟಿಸಿ ಕೆಲಸ ಮಾಡಬೇಕು. ಮುಂದೆ ಒಗ್ಗಟ್ಟಾಗಿ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಜನರಲ್ಲಿ ಸೌಹಾರ್ದ ಮನೋಭಾವ ಬೆಳೆಯಲು ಕ್ರೀಡೆಗಳು ತಳಹದಿ ಹಾಕುತ್ತವೆ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 18 at 11.31.56 AM

ಕೊಡಗು ಮುಸ್ಲಿಂ ಕಪ್ ‌2025ರ ಫೈನಲ್ ಪಂದ್ಯಾಟವು ಫ್ರೀಡಂ ಬಾಯ್ಸ್ ಹುಂಡಿ ಹಾಗೂ ತಾಜ್ ಕ್ರಿಕೆಟರ್ಸ್ ಕುಶಾಲನಗರ ತಂಡಗಳ ನಡುವೆ ಏರ್ಪಟ್ಟಿತ್ತು. ಮೊದಲು ಟಾಸ್ ಗೆದ್ದ ಫ್ರೀಡಂ ಬಾಯ್ಸ್ ಹುಂಡಿ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಬ್ಯಾಟಿಂಗ್ ಆರಂಭಿಸಿದ ತಾಜ್ ಕ್ರಿಕೆಟರ್ಸ್ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 49 ಗುರಿ ಕೊಟ್ಟಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಫ್ರೀಡಂ ಬಾಯ್ಸ್ ಹುಂಡಿ ತಂಡವು 40 ರನ್ ಗಳನ್ನು ಬಾರಿಸಿ ಸೋಲನುಭವಿಸಿತು.

ಈ ಸುದ್ದಿ ಓದಿದ್ದೀರಾ?: ಮಡಿಕೇರಿ | ‘ಕೊಡವಾಮೆ ಬಾಳೋ’ ಪಾದಯಾತ್ರೆ ಸಮಾರೋಪ : ಬೇಡಿಕೆ ಈಡೇರಿಸಲು ಕೊಡವರಿಂದ ಜಿಲ್ಲಾಡಳಿತಕ್ಕೆ ಮನವಿ

ಈ ವೇಳೆ ಕೊಡಗು ಮುಸ್ಲಿಂ ಕಪ್ ‌2025ರ ಪಂದ್ಯಾಟದಲ್ಲಿ ಸತತ 5ನೇ ಬಾರಿಗೆ ಚಾಂಪಿಯನ್ಸ್‌ ಪಟ್ಟ ಮುಡಿಗೇರಿಸಿಕೊಂಡ ಕುಶಾಲನಗರ ತಾಜ್ ಕ್ರಿಕೆಟರ್ಸ್ ತಂಡಕ್ಕೆ ಬಹುಮಾನ ವಿತರಣೆ ಮಾಡಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...