ಬೀದರ್‌ | ಜನಪದ ವಾದ್ಯಗಳು ಬದುಕಿನ ನೋವು ಮರೆಸುತ್ತವೆ : ಬಸವರಾಜ ಹೂಗಾರ

Date:

ಜನಪದ ವಾದ್ಯಗಳು ಮನರಂಜನೆಗಾಗಿ ಹುಟ್ಟಿಕೊಳ್ಳದೆ ಶ್ರಮಿಕ ವರ್ಗದ ಮತ್ತು ಕಲಾವಿದರ ದನಿಯಾಗಿವೆ. ಅವು ಜನರ ಬದುಕಿನ ನೋವು ಮರೆಸುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಹೇಳಿದರು.

ಸಾಹಿತ್ಯರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಲೋಕ ಮಂಚ್ ಟ್ರಸ್ಟ್ ವತಿಯಿಂದ ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಶನಿವಾರ ಜರುಗಿದ ಜಾನಪದ ಸಂಭ್ರಮ, ಕವಿಗೋಷ್ಟಿ, ವಿಚಾರ ಸಂಕಿರಣ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ʼಅಣ್ಣಾಭಾವು ಸಾಠೆಯವರ ಜನ್ಮದಿನದ ಪ್ರಯುಕ್ತ ಇಂದು ಸಂವಿಧಾನದ ಕುರಿತು ಕವಿಗೋಷ್ಟಿ ಆಯೋಜಿಸಿದ್ದು ಶ್ಲಾಘನೀಯ. ಮಾತನಾಡಲು, ಅಭಿವ್ಯಕ್ತಪಡಿಸಲು ಆಗದೇ ಇರುವಂತಹ ಇಂದಿನ ದಯನೀಯ ಸ್ಥಿತಿಯಲ್ಲಿ ಕವಿತೆ, ವಾದ್ಯಗಳ ಮೂಲಕ ಸಂವಿಧಾನ ಆಶಯಗಳನ್ನು ಜನಮನಕ್ಕೆ ತಲುಪಿಸಲು ಕವಿಗೋಷ್ಠಿ ಹಮ್ಮಿಕೊಂಡಿದ್ದು ಅಭಿನಂದನೀಯ ಕಾರ್ಯವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಡಾ. ಬಾಬಾ ಸಾಹೇಬರು ಸಮುದ್ರವಿದ್ದಂತೆ. ಅಪಾರ ಜ್ಞಾನ ಭಂಡಾರ ನೀಡಿದ್ದಾರೆ. ಅವರ ವಿಚಾರಧಾರೆಗಳು ಮುನ್ನಡೆಸಿಕೊಂಡು ಬಂದ ಅಣ್ಣಾಭಾವು ಸಾಠೆಯಾಗಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್, ಅಣ್ಣಾಭಾವು ಸಾಠೆ ಇವರೆಲ್ಲ ಪಂಥಗಳಾಚೆ ಬೆಳೆದವರು. ಇಡೀ ರಾಜ್ಯಕ್ಕೆ ಸಾಂಸ್ಕೃತಿಕ ರಾಜಧಾನಿಯಾಗಿದ್ದು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು. ಇಲ್ಲಿಯ ಸಾಂಸ್ಕೃತಿಕ ನಾಯಕರ ಜೀವನ ಮತ್ತು ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಬೇಕುʼ ಎಂದರು. ‌

WhatsApp Image 2024 08 24 at 8.00.17 PM
ಕಲಾವಿದರಿಂದ ಜಾನಪದ ಸಂಗೀತ ಗಾಯನ ನಡೆಸಿಕೊಟ್ಟರು.

ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಮನೋಹರ ಮಾಳಗೆ ಮಾತನಾಡಿ, ʼಸಂವಿಧಾನ ಮತ್ತು ಸಾಠೆಯವರ ಸಾಹಿತ್ಯ ಸಂಶೋಧನೆಯನ್ನು ಮನೆ-ಮನೆಗೆ ತಲುಪಿಸುವ ಕಾರ್ಯ ನಾವು ಮಾಡುತ್ತಿದ್ದೇವೆ. ಕೇವಲ ಒಂದೂವರೆ ದಿವಸ ಶಾಲೆಗೆ ಹೋಗಿ ನೂರಕ್ಕೂ ಅಧಿಕ ಸಾಹಿತ್ಯ ಕೃತಿ ರಚಿಸಿದ ಕೀರ್ತಿ ಅಣ್ಣಾಭಾವು ಸಾಠೆಯವರಿಗೆ ಸಲ್ಲುತ್ತದೆ. ಸಾಠೆಯವರ ಸಾಹಿತ್ಯ ಮನುಕುಲಕ್ಕೆ ದಾರಿದೀಪವಾಗಿವೆ. ಶೋಷಿತ ಸಮುದಾಯದಲ್ಲಿ ಜನಿಸಿ ಉತ್ತುಂಗಕ್ಕೆ ಬೆಳೆದ ಸಾಠೆಯವರು ಜನಮನ ಪರಿವರ್ತಿಸಿದ್ದಾರೆ. ಒಮ್ಮೆ ಮರಾಠಿಯಿಂದ ಕನ್ನಡಕ್ಕೆ ತರ್ಜುಮೆಗೊಂಡ ಸಾಠೆಯವರ ಪುಸ್ತಕ ಓದಿ ಈ ಟ್ರಸ್ಟ್ ಸ್ಥಾಪನೆ ಮಾಡಿದ್ದೇವೆʼ ಎಂದರು.

ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯ ವಿಜಯಕುಮಾರ ಸೋನಾರೆ ಮಾತನಾಡಿ, ʼಮೈಸೂರ ಭಾಗದವರು ಕೇವಲ ಮೂರು ಹಾಡು ಗಾಯನ ಮಾಡಿದರೂ ರಾಜ್ಯಮಟ್ಟದ ಕಲಾವಿದರೆನಿಸಿಕೊಳ್ಳುತ್ತಾರೆ. ಆದರೆ ಬೀದರ ಕಲಾವಿದರು ಸಾವಿರ ಹಾಡು ರಚಿಸಿ ಗಾಯನ ಮಾಡಿದರೂ ಪ್ರಚಾರ ಪಡೆದುಕೊಳ್ಳುವುದಿಲ್ಲ. ಸರಿಯಾದ ವೇಷಭೂಷಣ ಮತ್ತು ತಂಡ ಕಟ್ಟಿಕೊಂಡರೆ ಜಿಲ್ಲೆಯ ಕಲಾವಿದರಿಗೂ ರಾಜ್ಯಮಟ್ಟದಲ್ಲಿ ಮನ್ನಣೆ ಸಿಗುತ್ತದೆ. ಕಲಾವಿದರು ಪ್ರಯತ್ನಶೀಲರಾಗಬೇಕುʼ ಎಂದು ಕರೆ ನೀಡಿದರು.

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಸಂಜೀವಕುಮಾರ ಅತಿವಾಳೆ ಮಾತನಾಡಿದರು. ಜೆಸ್ಕಾಂ ಲೆಕ್ಕಾಧಿಕಾರಿ ಸುಮಂತ ಕಟ್ಟಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ ಉಪಸ್ಥಿತರಿದ್ದರು. ಗಿಪ್ಸನ್ ಕೋಟೆ ನಾಡಗೀತೆ ನೆರವೇರಿಸಿದರು. ಪ್ರವೀಣ ಚಂದ್ರ ಸ್ವಾಗತಿಸಿದರು. ಪ್ರೇಮ ಅವಿನಾಶ ನಿರೂಪಿಸಿದರು. ಮನೋಹರ ಮಿರ್ಜಾಪುರಕರ್ ವಂದಿಸಿದರು.

ಸಂವಿಧಾನ ಮಹತ್ವದ ಮೇಲೆ ಬೆಳಕು ಚೆಲ್ಲಿದ ಕವಿತೆಗಳು:

ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಕುರಿತು ಆಯೋಜಿಸಿದ ವಿಶೇಷ ಕವಿಗೋಷ್ಟಿಯನ್ನು ನಿವೃತ್ತ ಪ್ರಾಚಾರ್ಯ ಪ್ರೊ. ದೇವಿದಾಸ್ ತುಮಕುಂಟೆ ಉದ್ಘಾಟಿಸಿದರು. ಸಾಹಿತಿ ರಜಿಯಾ ಬಳಬಟ್ಟಿ ಹಾಗೂ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಲೋಕ ಮಂಚ್ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಮನೋಹರ ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಕವಿಗಳಾದ ಸುನಿತಾ ಬಿರಾದಾರ, ಬುದ್ದಾದೇವಿ ಸಂಗಮಕರ್, ಸಿದ್ದಮ್ಮ ಬಸಣ್ಣೋರ್, ಅಜೀತ್ ನೇಳಗಿ, ವಿಶ್ವಜೀತ್ ದಂಡಿನ್ ಸೇರಿದಂತೆ ಹಲವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಕುರಿತು ಮಾರ್ಮಿಕವಾಗಿ ಸ್ವರಚಿತ ಕವಿತೆ ವಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...