ಆನೆಗಳ ತಡೆಯಲು ರೈಲ್ವೆ ಹಳಿಯ ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ : ಸಿಎಂ ಸಿದ್ದರಾಮಯ್ಯ ಘೋಷಣೆ

Date:

  • ಅರಣ್ಯ ಸಚಿವರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಭೆ
  • ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ ಅನುಸರಿಸಲು ಸೂಚನೆ

ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚಾಗಿರುವ ಮಾನವ ವನ್ಯಪ್ರಾಣಿ ಸಂಘರ್ಷ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ರೈಲ್ವೆ ಹಳಿಯ ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ ನೀಡಲಾಗುವುದೆಂದು ತಿಳಿಸಿದರು.

ಮಂಗಳವಾರ ಮಾನವ- ವನ್ಯಪ್ರಾಣಿ ಸಂಘರ್ಷ ಕುರಿತು ಅರಣ್ಯ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ ಅವರು, ಕಳೆದ 15 ದಿನಗಳಲ್ಲಿ 11 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದು, ನಿನ್ನೆ ನಾಗರಹೊಳೆ ಅರಣ್ಯ ಪ್ರದೇಶದ ಹೆಗ್ಗಡದೇವನಕೋಟೆ ತಾಲ್ಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಕೃಷ್ಣ ನಾಯಕ್‌ ಎಂಬ 10 ವರ್ಷದ ಬಾಲಕನನ್ನು ಹುಲಿ ಎತ್ತೊಯ್ದಿರುವ ಕುರಿತು ಆತಂಕ ವ್ಯಕ್ತಪಡಿಸಿದರು.

“ಅರಣ್ಯ ಇಲಾಖೆಯ ಅಧಿಕಾರಿಗಳು ಇಂತಹ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಬೇಕು. ಭಾರೀ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ ತೆರವುಗೊಳಿಸಬೇಕು” ಎಂದು ಮುಖ್ಯಮಂತ್ರಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನದಲ್ಲಿ ಆನೆಗಳ ಅರಿವಳಿಕೆ ತಜ್ಞ ವೆಂಕಟೇಶ್‌ ಅವರು ಆನೆ ತುಳಿತಕ್ಕೆ ಬಲಿ ಆಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಗಾಯಾಳು ಆನೆಗೆ ಚಿಕಿತ್ಸೆ ನೀಡುವಾಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತೇ ಎಂದು ಖಾರವಾಗಿ ಪ್ರಶ್ನಿಸಿದ ಸಿದ್ದರಾಮಯ್ಯ, ಹಾಸನ ಡಿಎಫ್ಓಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲ, ಮುಖ್ಯಮಂತ್ರಿಗೆ ಮನವಿ

ಆನೆಗಳು ಜನವಸತಿಗಳತ್ತ ಬರುವುದನ್ನು ತಡೆಯಲು ರೈಲ್ವೆ ಹಳಿಯ ತಡೆಗೋಡೆ ನಿರ್ಮಿಸಲು ಈ ವರ್ಷ 100 ಕೋಟಿ ರೂ. ಒದಗಿಸಲಾಗಿದೆ. ಇದರಲ್ಲಿ ಹಳೆ ಬಾಕಿ 54 ಕೋಟಿ ರೂ. ಪಾವತಿಸಬೇಕಾಗಿದೆ. ಉಳಿದ ಮೊತ್ತದಲ್ಲಿ ಕೇವಲ 50 ಕಿ.ಮೀ. ತಡೆಗೋಡೆ ನಿರ್ಮಿಸಲು ಸಾಧ್ಯವೆಂದ ಸಚಿವ ಈಶ್ವರ ಖಂಡ್ರೆ, ಹೆಚ್ಚುವರಿ ಅನುದಾನ ಒದಗಿಸಲು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಳೆ ಬಾಕಿ 54 ಕೋಟಿ ರೂ. ಜೊತೆಗೆ 100 ಕೋಟಿ ರೂ.ಗಳನ್ನು ಈ ವರ್ಷ ವೆಚ್ಚ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...