ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ, ಸಾಮೂಹಿಕ ಸ್ವಚ್ಛತಾ ಕಾರ್ಯ

Date:

ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತ ಡಿ ಎಸ್ ರಮೇಶ್ ಅವರ ನಿರ್ದೇಶನದಂತೆ ಇಂದು ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆ, ವಾರ್ಡ್ ಸಂಖ್ಯೆ-82ರ ಗರುಡಾಚಾರಪಾಳ್ಯ ಹಾಗೂ ವಾರ್ಡ್ ಸಂಖ್ಯೆ-51 ವಿಜೀನಾಪುರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮತ್ತು ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

ಮಹದೇವಪುರ ವಿಭಾಗ ವ್ಯಾಪ್ತಿಯ ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆಯ ವರ್ತೂರು ಕೋಡಿಯಿಂದ ಹೋಪ್ ಫಾರ್ಮ್‌ವರೆಗೆ, ವಾರ್ಡ್ ಸಂಖ್ಯೆ-82 ಗರುಡಾಚಾರಪಾಳ್ಯದಲ್ಲಿನ ಸಿಂಗಯ್ಯಪಾಳ್ಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಹಾಗೂ ಕೆ ಆರ್ ಪುರಂ ವಿಭಾಗ ವಾರ್ಡ್ ಸಂಖ್ಯೆ-51ವಿಜೀನಾಪುರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಮಹದೇವಪುರ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂತೆ ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುವುದು ಎಂದು ಮಹಾದೇವಪುರ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾದಚಾರಿ ಮಾರ್ಗಗಳಲ್ಲಿ ನಿರ್ಮಿಸಿದ ಪೆಟ್ಟಿಗೆ ಅಂಗಡಿಗಳು, ವಾಣಿಜ್ಯ ಮಳಿಗೆಗಳ ಮುಂದಿನ ಮೇಲ್ಛಾವಣಿಗಳು, ತಾತ್ಕಾಲಿಕ ಮೇಲ್ಛಾವಣಿ, ತಳ್ಳುವ ಗಾಡಿಗಳು, ಹಣ್ಣಿನ ಅಂಗಡಿಗಳು, ಡೆಬ್ರೀಸ್, ಅನಧಿಕೃತ ಕೇಬಲ್‌ಗಳು, ಫುಟ್‌ಪಾತ್ ಹೋಟೆಲ್‌ಗಳು ಮುಂತಾದವುಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಲಾಯಿತು.

ಸಾಮೂಹಿಕ ಸ್ವಚ್ಛತಾ ಕಾರ್ಯ

ಪೂರ್ವ ನಗರ ಪಾಲಿಕೆಯ ಕೆ ಆರ್ ಪುರ ಮುಖ್ಯ ರಸ್ತೆ, ಬಸವನಪುರ, ಬೆಳ್ಳಂದೂರು, ಹೂಡಿ, ವಿಜ್ಞಾನ ನಗರ ಮತ್ತು ದೇವಸಂದ್ರ ವಾರ್ಡ್ ವ್ಯಾಪ್ತಿಯ ಹಲವು ಕಡೆಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಹಾಗೂ ಬಿ ನಾರಾಯಣಪುರ, ಕೆ ಆರ್ ಪುರ, ಪೈ ಬಡಾವಣೆ ಪ್ರದೇಶಗಳಲ್ಲಿನ ಒಳಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಗದಗ | ದಲಿತ ಮಹಿಳೆಗೆ ಅವಮಾನ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು

ಇಂದು ನಡೆದ ತೆರವು ಕಾರ್ಯಾಚರಣೆ ಮತ್ತು ಸಾಮೂಹಿಕ ಸ್ವಚ್ಛತಾ ಕಾರ್ಯದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಅಭಿಯಂತರರು, ಜೆಹೆಚ್ಐಗಳು, ವಾರ್ಡ್ ಮಾರ್ಷಲ್‌ಗಳು ಹಾಗೂ ಪೌರಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...