ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲೇ ತುಂಬಿದ ಕೆಆರ್​ಎಸ್!

Date:

ದಕ್ಷಿಣ ಕರ್ನಾಟಕದ ಪ್ರಮುಖ ಜಲಾಶಯವಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಅಣೆಕಟ್ಟು ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಿನಲ್ಲಿಯೇ ಭರ್ತಿಯಾಗಿದೆ. ಜಲಾಶಯ ತುಂಬಿರುವುದರಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಬಹುತೇಕ ಈ ವರ್ಷ ನೀರಿನ ವಿಚಾರವಾಗಿ ತಮಿಳುನಾಡು-ಕರ್ನಾಟಕ ನಡುವೆ ವಿವಾದ ಮುನ್ನೆಲೆಗೆ ಬರುವ ಸಾಧ್ಯತೆ ತೀರಾ ಕಡಿಮೆಯಿದೆ ಎಂಬ ಮುನ್ಸೂಚನೆಯನ್ನೂ ನೀಡಿದೆ.

ಸಾಮಾನ್ಯವಾಗಿ, ಕೆಆರ್‌ಎಸ್‌ ಅಣೆಕಟ್ಟು ಜುಲೈ ಅಥವಾ ಆಗಸ್ಟ್‌ ತಿಂಗಳಿನಲ್ಲಿ ಭರ್ತಿಯಾಗುತ್ತಿತ್ತು. ಕೆಲವು ವರ್ಷಗಳಲ್ಲಿ ಭರ್ತಿಯೇ ಆಗದೆ ನೀರಿನ ಅಭಾವವೂ ಎದುರಾಗುತ್ತಿತ್ತು. ಅಂತಹ ಸಂದರ್ಭಗಳಲ್ಲಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ತಗಾದೆ ತೆಗೆಯುತ್ತಿತ್ತು. ಕಾವೇರಿ ನೀರಿಗಾಗಿ ತಮಿಳುನಾಡು ಮತ್ತು ಕರ್ನಾಟಕ ನಡುವೆ ವಿವಾದ ಎದುರಾಗುವುದು ಮಾತ್ರವಲ್ಲದೆ, ಭಾರೀ ಪ್ರತಿಭಟನೆಗಳು, ಬಂದ್‌ಗಳು ನಡೆಯುತ್ತಿದ್ದವು. ಈ ವರ್ಷ, ಇದೇ ಮೊದಲ ಬಾರಿಗೆ ಜೂನ್‌ನಲ್ಲಿಯೇ ಜಲಾಯಶ ತುಂಬಿದೆ.

ಕೆಆರ್‌ಎಸ್‌ ಜಲಾಶಯವು 124.80 ಅಡಿ ಗರಿಷ್ಠ ಸಾಮರ್ಥ್ಯವನ್ನು ಹೊಂದಿದೆ. ಜೂನ್ ಆರಂಭದಲ್ಲೇ ಅಣೆಕಟ್ಟಿನಲ್ಲಿ ನೀರಿನ ಮಟ್ಟ 100 ಅಡಿ ದಾಟಿತ್ತು. ಇದೀಗ, ಸಂಪೂರ್ಣವಾಗಿ ಭರ್ತಿಯಾಗಿದೆ.​ ಜಲಾಶಯಕ್ಕೆ 22 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದ್ದು, ಅಣೆಕಟ್ಟಿನಿಂದ 630 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಎತ್ತ ಸಾಗುತ್ತಿದೆ ಬೆಂಗಳೂರು ಕಾಲ್ತುಳಿತ ಪ್ರಕರಣದ ತನಿಖೆ?

ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ತಿಳಿದುಬಂದಿದೆ. ಜೂನ್‌ ತಿಂಗಳಲ್ಲೇ ಕಾವೇರಿಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿಯೂ ಸಿದ್ದರಾಮಯ್ಯನವರೇ ಆಗಲಿದ್ದಾರೆ.

ಅಂದಹಾಗೆ, 1979ರಲ್ಲಿ ಅಂದಿನ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ಅವರು ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿಯನ್ನು ಆರಂಭಿಸಿದರು. ಅಂದಿನಿಂದ, ಕೆಆರ್‌ಎಸ್‌ ತುಂಬಿದಾಗೆಲ್ಲ, ಮುಖ್ಯಮಂತ್ರಿಗಳು ಕಾವೇರಿಗೆ ಬಾಗಿನ ಅರ್ಪಿಸುವುದನ್ನು ಮುಂದುವರೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...