ಮಂಡ್ಯ | ರಸ್ತೆ ಬದಿಯಲ್ಲಿದ್ದ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿದ ಅರಣ್ಯ ಇಲಾಖೆ: ಪರಿಸರವಾದಿಗಳ ಆಕ್ರೋಶ

Date:

ಮಂಡ್ಯ ನಗರದ ನೂರಡಿ ರಸ್ತೆಯಲ್ಲಿದ್ದಂತಹ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳ ನಡೆಗೆ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ ನಗರ ನೂರಡಿ ರಸ್ತೆಯಲ್ಲಿ ರಿಲಯನ್ಸ್ ಮಾರ್ಟ್‌ಗೆ ಅನುಕೂಲ ಮಾಡಿಕೊಡುವುದಕ್ಕಾಗಿ ನೆರಳು ಕೊಡುವ ಮರವನ್ನು ಹೀಗೆ ಅಮಾನವೀಯವಾಗಿ ಕತ್ತರಿಸಿದ್ದಾರೆಂದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ಆರೋಪಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಲ ನಡೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅರವಿಂದ ಪ್ರಭು, “ಮರಗಳನ್ನು ಮನಸೋ ಇಚ್ಛೆ ಕತ್ತರಿಸಿರುವ ಮಂಡ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ ಮಾಡುವಂತೆ ಜಿಲ್ಲಾಡಳಿತ ಮತ್ತು ಸರಕಾರವನ್ನು ನಾಡಿನ ಎಲ್ಲ ಪರಿಸರ ಪ್ರೇಮಿಗಳೂ ಒತ್ತಾಯಿಸಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಚಿತ್ರಕೂಟದ ಸಂಘಟಕರು, ಪರಿಸರವನ್ನು ಉಳಿಸುವ ಕೆಲಸಕ್ಕಾಗಿ ಹೋರಾಡುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇವೆ ಎಂದು ಈ ದಿನ.ಕಾಮ್‌ನೊಂದಿಗೆ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.

ಮರ1

“ಮರಕ್ಕೆ ಕೊಡಲಿ ಹಾಕಿದ ತಪ್ಪಿತಸ್ಥರು ದಂಡ ತೆರಲೇಬೇಕು. ಪರಿಸರ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ತಿಳಿಸಿದ್ದಾರೆ.

ಕನ್ನಡ ಹೋರಾಟಗಾರರಾದ ನಾಗಣ್ಣ ಎಂ ಬಿ ಮಾತನಾಡಿ, “ಈ‌ ಮರಗಳ ಮಾರಣಹೋಮದ ಹಿಂದೆ ಮಾರ್ವಾಡಿಗಳಿದ್ದಾರೆ. ಜಾಗತಿಕವಾಗಿ ಸಾಹಿತ್ಯ ಸಮ್ಮೇಳನಕ್ಕೆ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಅರಣ್ಯ ಇಲಾಖೆ ಹಸಿರು ನಾಶ ಮಾಡಿ, ಬೋಳು ಮರಗಳ ಮಂಡ್ಯ ನಗರವನ್ನು ನಿರ್ಮಿಸಲು ಹೊರಟಿದೆ. ಎಲ್ಲಾ ಸಂಘಟನೆಯ ಗೆಳೆಯರು ಪರಿಸರವನ್ನು ಉಳಿಸುವ ಈ ಹೋರಾಟಕ್ಕಾಗಿ ದನಿ ಎತ್ತಬೇಕಿದೆ” ಎಂದರು.

ಅರಣ್ಯ ಇಲಾಖೆ ಹಸಿರು ನಾಶ ಮಾಡಿ ಬೋಳು ಮರಗಳ ಮಂಡ್ಯ ನಗರವನ್ನು ನಿರ್ಮಿಸಲು ಹೊರಟಿದೆ. ಈ ಬಗ್ಗೆ ಸಾರ್ವಜನಿಕರು, ಸಂಘಟಕರು ಪ್ರಶ್ನಿಸಲು ಹೋದರೆ ಗುತ್ತಿಗೆದಾರರು ಗುಂಪು ಬೆದರಿಕೆಯನ್ನು ಒಡ್ಡುತ್ತಿದ್ದಾರೆಂದು ಎಂದು ತಿಳಿದುಬಂದಿದೆ. ಮರಕ್ಕೆ ಕೊಡಲಿ ಹಾಕಿದ ತಪ್ಪಿಸ್ಥರು ದಂಡ ತೆರಲೇಬೇಕು. ಪರಿಸರ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಮರ2

ಈ ಬಗ್ಗೆ ವಲಯ ಅರಣ್ಯಾಧಿಕಾರಿ ಶೈಲಜಾ ಅವರನ್ನು ಈ ದಿನ.ಕಾಮ್ ಸಂಪರ್ಕಿಸಿ, ‘ಈ ರೀತಿ ಮರಗಳನ್ನು ಅಡ್ಡಾದಿಡ್ಡಿಯಾಗಿ ಏಕೆ ಉರುಳಿಸಲಾಗಿದೆ’ ಎಂದು ಕೇಳಿದಾಗ, “ಅರಣ್ಯ ಇಲಾಖೆಯು ಫಾರೂಕ್ ಎನ್ನುವವರಿಗೆ ಟೆಂಡರ್ ನೀಡಲಾಗಿತ್ತು. ನಮ್ಮ ಸಿಬ್ಬಂದಿ ವರ್ಗ, ಮರ ಕಡಿಯುವ ಜಾಗಕ್ಕೆ ಹೋಗುವ ಮೊದಲೆ, ಗುತ್ತಿಗೆದಾರನಾದ ಫಾರೂಕ್ ಮರಗಳನ್ನು ಈ ರೀತಿ ಮರವನ್ನು ಕತ್ತರಿಸಿಟ್ಟಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಮತ್ತು ದಂಡವನ್ನು ವಿಧಿಸುತ್ತೇವೆ” ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಮನಗರ | ಹಣಕ್ಕೆ ಬೇಡಿಕೆಯಿಟ್ಟ ಆರೋಪ: ಹಾರೋಹಳ್ಳಿ ಪ. ಪಂ. ಮುಖ್ಯಾಧಿಕಾರಿ ಶ್ವೇತಾ ಅಮಾನತು

ಈ ಬಗ್ಗೆ ಜಿಲ್ಲಾಧಿಕಾರಿಗಳು, ಅರಣ್ಯಾಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು. ಗುತ್ತಿಗೆದಾರರು ನಿಯಮ ಉಲ್ಲಂಘನೆ ಮಾಡಿರುವುದರ ಬಗ್ಗೆ ವಿಚಾರಣೆ ನಡೆಸಬೇಕು. ಈ ಬಗ್ಗೆ ಯಾವ ಕ್ರಮ ಕೈಗೊಂಡಿದ್ದಾರೆಂದು ಸ್ಪಷ್ಟಿಕರಿಸಬೇಕೆಂದು ಪರಿಸರ ಪ್ರೇಮಿಗಳು, ಚಿತ್ರಕೂಟದ ಬಳಗದವರು ಒತ್ತಾಯಿಸಿದ್ದಾರೆ.

ಮರ3
Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...