ದೇವದಾರಿಯಲ್ಲಿ ಗಣಿಗಾರಿಕೆಗಿಲ್ಲ ದಾರಿ; ಅನುಮತಿ ನಿರಾಕರಿಸಲು ಅರಣ್ಯ ಸಚಿವ ಖಂಡ್ರೆ ಸೂಚನೆ

Date:

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ (KIOCL) ಅನುಮತಿ ನೀಡಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಸಹಿ ಹಾಕಿದ್ದಾರೆ. ಆದರೆ, ಅಲ್ಲಿ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಉದ್ದೇಶಿತ ಗಣಿ ಪ್ರದೇಶವು ಅರಣ್ಯ ಭೂಮಿಯಾಗಿದೆ. ಅಲ್ಲಿ ಗಣಿಗಾರಿಕೆ ನಡೆಸುವುದರಿಂದ 1 ಲಕ್ಷ ಮರಗಳು ನಾಶವಾಗಲಿವೆ. ಅರಣ್ಯ ಪ್ರದೇಶದಲ್ಲಿ ಹೊಸ ಗಣಿಗಾರಿಕೆಗೆ ಅನುಮತಿ ನೀಡದಂತೆ 2016ರ ಮಾರ್ಚ್ 28ರಂದು ಅರಣ್ಯ ಇಲಾಖೆಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಗಣಿಗಾರಿಕೆ ನಡೆಸಲು ಕೇಂದ್ರದ ಅನುಮತಿ ಪಡೆದಿರುವ ಕಂಪನಿ ವಿರುದ್ಧ ಹಲವಾರು ನಿಯಮ ಉಲ್ಲಂಘನೆಯ ಆರೋಪಗಳಿವೆ. ಈ ಎಲ್ಲ ಕಾರಣಗಳಿಂದ, ಅನುಮತಿ ನಿರಾಕರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಗಣಿಗಾರಿಕೆಗೆ ಅನುಮತಿ ನೀಡಿ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ದೇವದಾರಿಯಲ್ಲಿ ಗಣಿಗಾರಿಕೆ ವಿರೋಧಿಸಿ ‘ಸೇವ್ ಸಂಡೂರು ಫಾರೆಸ್ಟ್‌’ ಎಂಬ ಅಭಿಮಾನವನ್ನು ಕನ್ನಡಿಗರು ಆರಂಭಿಸಿದ್ದಾರೆ. ಉತ್ತರ ಕರ್ನಾಟಕದ ಆಮ್ಲಜನಕ ತಾಣವಾಗಿರುವ ಅರಣ್ಯ ಪ್ರದೇಶಕ್ಕೆ ಕೊಡಲಿ ಹಾಕಲು ಬಿಡುವುದಿಲ್ಲವೆಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...