ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ ರಚನೆ: ಸಿಎಂ ಸಿದ್ದರಾಮಯ್ಯ ಭರವಸೆ

Date:

  • ‘ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು’
  • ಸರ್ಕಾರ ಅಲೆಮಾರಿಗಳನ್ನು ಗುರುತಿಸಬೇಕಿದೆ: ಸಿದ್ದರಾಮಯ್ಯ

ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರೊಂದಿಗೆ ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.

“ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಅಲೆಮಾರಿ ಜನಾಂಗಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಇವರಿಗೆ ವಿಶೇಷವಾಗಿ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲೆಮಾರಿಗಳ ಸಮಸ್ಯೆಗಳು ವಿಶಿಷ್ಟವಾಗಿದ್ದು, ಒಟ್ಟು 120 ಜಾತಿಗಳಿವೆ. ಈ ಪೈಕಿ ಎಸ್.ಸಿ 51, ಎಸ್.ಟಿ 23 ಹಾಗೂ ಹಿಂದುಳಿದ ವರ್ಗದ 46 ಜಾತಿಗಳಿವೆ. ವಿವಿಧ ರಾಜ್ಯ ಮಟ್ಟದ ಸಂಘಟನೆಗಳಿದ್ದು, ಅವುಗಳನ್ನು ಒಟ್ಟು ಸೇರಿಸಿ ಸಮನ್ವಯ ಸಮಿತಿ ರಚಿಸಲಾಗಿದೆ. ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ, ಅಸ್ಮಿತೆ ಇಲ್ಲದ ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ಸರ್ಕಾರ ಅಲೆಮಾರಿಗಳನ್ನು ಗುರುತಿಸಬೇಕಿದೆ” ಎಂದು ಹೇಳಿದರು.

“ದಾಖಲೆಗಳಲ್ಲಿ ಇವರು ಇಲ್ಲದಿರುವುದರಿಂದ ಸಮಾಜದ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ಜಾತಿ ಪ್ರಮಾಣಪತ್ರ ಕೂಡ ಇವರಿಗಿಲ್ಲ. ಸರ್ಕಾರ ಕೆಲವು ಜಾತಿಗಳನ್ನು ಮಾತ್ರ ಗುರುತಿಸಿದ್ದು, ಇವರನ್ನು ಗುರುತಿಸುವ ಔದಾರ್ಯವನ್ನು ಸರ್ಕಾರ ತೋರಬೇಕು. ಸಮಾನ ಕುಲ, ಗೋತ್ರ, ಭಾಷೆ ಇರುವ ಜಾತಿಗಳನ್ನು ಗುರುತಿಸಬೇಕಿದೆ. ತಬ್ಬಲಿ ಸಮುದಾಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಅಲೆಮಾರಿ ಸಮುದಾಯಗಳಿಗೆ ಆಯೋಗ ರಚಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುದ್ದಿ ಕಲಿಯದ ಕಾಂಗ್ರೆಸ್‌ ಮತ್ತು ಗಲಭೆ ಹುಡುಕುವ ಬಿಜೆಪಿ

“ಆಗಸ್ಟ್ 31ರಂದು ರಾಷ್ಟ್ರೀಯ ಅಲೆಮಾರಿ ವಿಮುಕ್ತ ದಿನಾಚರಣೆಯಂದು ರಾಜ್ಯ ಸರ್ಕಾರ ಆಚರಿಸಬೇಕು. ಜೋಗಿ, ಪಿಚ್ಚಗುಂಟಲು ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಅವುಗಳನ್ನು ಸೂಕ್ತ ಜಾತಿಗೆ ಸೇರಿಸಿ ಮೀಸಲಾತಿ ಕಲ್ಪಿಸಬೇಕು, ಅಲೆಮಾರಿ ಸಮುದಾಯಕ್ಕೂ ರಾಜಕೀಯ ಪ್ರಾತಿನಿಧ್ಯ ನೀಡಬೇಕು” ಎಂದು ಸಮಿತಿಯ ಮುಖಂಡರು ಮನವಿ ಮಾಡಿದರು.

ಮುಂದುವರಿದು, “ಹಲವು ಜಾತಿಗಳು ಬಹುನಾಮಿಗಳಾಗಿರುವುದರಿಂದ ಜಾತಿ ಪ್ರಮಾಣ ಪತ್ರ ದೊರೆಯುತ್ತಿಲ್ಲ. ಅಗೋಚರ ಸಮುದಾಯಗಳು ಪ್ರಾತಿನಿಧ್ಯವಿಲ್ಲದೆ ಇದ್ದಾರೆ. ಅವರಿಗೆ ಗುರುತು ಸಿಕ್ಕರೆ, ಶಿಕ್ಷಣ, ಸರ್ಕಾರದ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ” ಎಂದು ಮುಖ್ಯಮಂತ್ರಿಗಳನ್ನು ಕೋರಿದರು.

ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಹಿರಿಯ ಉಪನ್ಯಾಸಕ ಡಾ. ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...