ಕಾವೇರಿ ನೀರು | ಜನರ ಹಿತ ಕಾಯಲಿ, ನಾವು ಸಹಕಾರ ಕೊಡುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

Date:

  • ‘ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ಸರ್ಕಾರ ವಿಫಲ
  • ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು: ಬೊಮ್ಮಾಯಿ

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, “ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು ಒಂದು ವ್ಯವಸ್ಥೆ ಇರುವ ಸಂದರ್ಭದಲ್ಲಿ ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ದೂರಿದರು.

“ಒಂದೆಡೆ ನೀರು ಬಿಡುತ್ತದೆ ಮತ್ತೊಂದೆಡೆ ವಾದ ಮಾಡುತ್ತಾರೆ. ಸುಪ್ರೀಂ ಕೋರ್ಟ್‌ನಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡಲು ಪ್ರಯತ್ನ ಮಾಡಬೇಕು‌. ನಾವು ವಿರೋಧ ಪಕ್ಷವಾಗಿ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ. ಮಂಡ್ಯ ಮೈಸೂರು ಭಾಗದ ರೈತರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಇಡೀ ವರ್ಷ ನೀರಿನ ಕೊರತೆ ನಿರ್ವಹಣೆ ಮಾಡಬೇಕಿದೆ. ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಬಿಜೆಪಿ, ಜೆಡಿಎಸ್ ನವರಿಗೆ ಉತ್ತರ ಕೊಡಬೇಕಿಲ್ಲ ಎಂದು ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಡಿ‌ಕೆ ಶಿವಕುಮಾರ್ ನೀರಾವರಿ ಸಚಿವರು ಅವರು ರಾಜ್ಯದ ಜನತೆಗೆ, ರೈತರಿಗೆ, ಬೆಂಗಳೂರಿನ ಜನತೆಗೆ ಉತ್ತರ ಕೊಡಲಿ. ನಾವು ವಿರೋಧ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳಿದ್ದೇವೆ. ರೈತರನ್ನು ಕೋರ್ಟ್‌ಗೆ ಹೋಗಿ ಎಂದರೆ ಹೇಗೆ? ಅವರು ರಾಜ್ಯದ ಜನರ ಹಿತ ಕಾಯಲಿ ನಾವು ಅವರಿಗೆ ಸಹಕಾರ ನೀಡುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...