ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಪತ್ನಿ ರುದ್ರಾಂಬಾ ನಿಧನ

Date:

ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ. ರುದ್ರಾಂಬಾ ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾಗಿದ್ದಾರೆ.

83 ವರ್ಷದ ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದು, ಅವರ ಅಂತ್ಯಕ್ರಿಯೆ ಮಂಗಳವಾರ ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರವಾಗಿ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಹೂವಿನ ಹಡಗಲಿಯಲ್ಲಿ ಮಂಗಳವಾರ ಸಂಜೆ 4.30 ಕ್ಕೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ. ದಿ.‌ ಎಂ.ಪಿ. ಪ್ರಕಾಶ್‌ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಚಾಮರಾಜನಗರ | ಹಾಲಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ರುದ್ರಾಂಬಾ ಅವರಿಗೆ ಮೂರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರರಿದ್ದು, ಹರಪನಹಳ್ಳ ಕ್ಷೇತ್ರದ ಶಾಸಕರಾಗಿದ್ದ ಅವರ ಪುತ್ರ ಎಂ.ಪಿ.ರವೀಂದ್ರ ಕೆಲ ವರ್ಷದ ಹಿಂದೆಯೇ ತೀರಿಕೊಂಡಿದ್ದಾರೆ. ಎಂ.ಪಿ. ಪ್ರಕಾಶ್‌ ಅವರೂ ದಶಕಗಳ ಹಿಂದೆಯೇ ವಿಧಿವಶರಾಗಿದ್ದರು.

ಇನ್ನು ರುದ್ರಾಂಬಾ ಅವರಿಗೆ ಲತಾ ಮಲ್ಲಿಕಾರ್ಜುನ, ಸುಮಾ ಹಾಗೂ ವೀಣಾ ಎಂಬ ಮೂವರು ಪುತ್ರಿಯರಿದ್ದಾರೆ. ಪುತ್ರಿಯರಲ್ಲಿ ಲತಾ ಮಲ್ಲಿಕಾರ್ಜುನ ಅವರು ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿಯಾಗಿದ್ದಾರೆ.

ರಾಜಕಾರಣಿ ಎಂ.ಪಿ. ಪ್ರಕಾಶ್‌ ಅವರ ಪತ್ನಿ ಕೂಡಾ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅನಾರೋಗ್ಯದ ಕಾರಣದಿಂದಾಗಿ ಇತರೆ ಚಟುವಟಿಕೆಯಿಂದ ದೂರ ಉಳಿದಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

“ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ರುದ್ರಾಂಬಾ ಅವರು ತಮ್ಮ ಪತಿಯ ಆದರ್ಶಗಳನ್ನು ಪಾಲಿಸುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ನೊಂದ ಜನರ ಬದುಕಿಗೆ ಬೆಳಕಾಗಿದ್ದವರು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...