ರಾಯಚೂರು | ಮಾಜಿ ಶಾಸಕನಿಂದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಮುಖಕ್ಕೆ ಗಂಭೀರ ಗಾಯ

Date:

ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಜೆಡಿಎಸ್ ಪಕ್ಷದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಉದ್ಯಮಿ ವೀರಭದ್ರಪ್ಪಗೌಡ ಆಲ್ದಾಳ ಮೇಲೆ ದೈಹಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆಗೊಳಗಾಗಿರುವ ವೀರಭದ್ರಪ್ಪಗೌಡ ಆಲ್ದಾಳ ಪೊಲೀಸ್ ಪೇದೆ ವೀರಭದ್ರಯ್ಯ ಹಿರೇಮಠ ಅವರಿಗೆ ದೂರು ಸಲ್ಲಿಸಿದ್ದರೂ, ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಭಾನುವಾರ ಮಧ್ಯಾಹ್ನ ಪೊಲೀಸ್ ಪೇದೆ ವೀರಭದ್ರಯ್ಯ ಹಿರೇಮಠ ಕರೆಯ ಮೇರೆಗೆ ವೀರಭದ್ರಪ್ಪಗೌಡ ಆಲ್ದಾಳ ಪೊಲೀಸ್ ಠಾಣೆಗೆ ಆಗಮಿಸಿದ್ದರು.

ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಭೇಟಿಯಾಗಿ ಠಾಣೆಯಿಂದ ಹೊರಬರುತ್ತಿದ್ದಾಗ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಏಕಾಏಕಿ ನನಗೆ ಕಾಲಿನಿಂದ ಒದ್ದು, ಮುಖಕ್ಕೆ ಹೊಡೆದಿದ್ದಾರೆ ಎಂದು ವೀರಭದ್ರಪ್ಪಗೌಡ ಆಲ್ದಾಳ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ವೀರಭದ್ರಪ್ಪಗೌಡ ಘಟನೆಯ ದೃಶ್ಯಾವಳಿ ಪೊಲೀಸ್ ಠಾಣೆಯ ಸಿಸಿ ಟಿವಿಯಲ್ಲಿ ದಾಖಲಾಗಿರಬಹುದು ಅದನ್ನು ನೀಡುವಂತೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಆದರೆ ತಮ್ಮ ಮೇಲೆ ನಡೆದಿರುವ ಹಲ್ಲೆ ಕುರಿತು ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಆರೋಪಿಸಿದ್ದಾರೆ.ಗಾಯಗೊಂಡ ಆಲ್ದಾಳ್ ವೀರ ಭದ್ರಪ್ಪ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...