ಕೃಷಿ ಸಚಿವರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ನ್ಯಾಯಾಲಯದಲ್ಲಿ ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್‌ ಗೌಡ

Date:

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವರ್ಚಸ್ಸು ಮತ್ತು ಘನತೆಗೆ ಧಕ್ಕೆ ತರುವ ದುರುದ್ದೇಶದಿಂದ ಸಾರ್ವಜನಿಕವಾಗಿ ಆಧಾರರಹಿತ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ ಗೌಡ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಚಿವ ಚಲುವರಾಯಸ್ವಾಮಿ ಅವರಿಗೆ ಜಯ ಲಭಿಸಿದೆ.

ಸಚಿವರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದ ಸುರೇಶ್‌ ಗೌಡ, ಇದೀಗ ನ್ಯಾಯಾಲಯದ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡು ಸಚಿವರ ಕ್ಷಮೆ ಯಾಚಿಸಿದ್ದಾರೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಚಿವ ಚಲುವರಾಯಸ್ವಾಮಿಯವರು ಸಲ್ಲಿಸಲಾಗಿದ್ದ ದೂರಿನ ಅನ್ವಯ, ಸುರೇಶ್‌ ಗೌಡ ಅವರು ಚಲುವರಾಯಸ್ವಾಮಿ ಅವರ ಘನತೆ, ಗೌರವ ಮತ್ತು ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾದ ಮಾಜಿ ಶಾಸಕ ಸುರೇಶ್ ಗೌಡ ಸಲ್ಲಿಸಲಾದ ಜಂಟಿ ಮೆಮೋದಲ್ಲಿ, ಸುರೇಶ್‌ ಗೌಡ ಅವರು ತಾವು ಮಾಡಿದ ಯಾವುದೇ ಹೇಳಿಕೆಗಳಿಂದ ಸಚಿವ ಚಲುವರಾಯಸ್ವಾಮಿ ಅವರಿಗೆ ನೋವಾಗಿದ್ದರೆ ಅಥವಾ ಅವರ ಘನತೆಗೆ ಧಕ್ಕೆಯಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೃಷಿ ಕಾಲೇಜು ಚಲುವರಾಯಸ್ವಾಮಿ

“ನನ್ನ ಯಾವುದೇ ಹೇಳಿಕೆಯಿಂದ ದೂರುದಾರರಿಗೆ(ಚಲುವರಾಯಸ್ವಾಮಿಯವರಿಗೆ) ನೋವಾಗಿದ್ದರೆ, ಯಾವುದೇ ದುರುದ್ದೇಶವಿಲ್ಲದೆ ಈ ಹೇಳಿಕೆಯನ್ನು ನೀಡಲಾಗಿದೆ, ಮತ್ತು ದೂರುದಾರರಿಗೆ ಅಥವಾ ದೂರುದಾರರ ಘನತೆಗೆ ಧಕ್ಕೆ ತರುವ ಅಥವಾ ದೂರುದಾರರನ್ನು ಮಾನಹಾನಿ ಮಾಡುವ ಯಾವುದೇ ಉದ್ದೇಶವಿರಲಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಆರೋಪಿಯು ನೀಡಿದ ಯಾವುದೇ ಹೇಳಿಕೆ ದೂರುದಾರರಿಗೆ ನೋವುಂಟು ಮಾಡಿದ್ದರೆ, ಆರೋಪಿಯು ದೂರುದಾರರಲ್ಲಿ ವಿಷಾದ ವ್ಯಕ್ತಪಡಿಸುತ್ತಾನೆ ಎಂದು ಮೆಮೋದಲ್ಲಿ ತಿಳಿಸಲಾಗಿದೆ.

ಈ ತೀರ್ಪು ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳ ವಿರುದ್ಧ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವವರಿಗೆ ಸ್ಪಷ್ಟ ಸಂದೇಶ ರವಾನಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಚಿವರ ಪರ ಹೈಕೋರ್ಟ್‌ ವಕೀಲರಾದ ಸೂರ್ಯ ಮುಕುಂದ್ ರಾಜ್ ವಕಾಲತ್ತು ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...