ಯಾದಗಿರಿ | ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Date:

ಯಾದಗಿರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (70) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿದ್ದ ಮುದ್ನಾಳ ಮೊದಲ ಬಾರಿಗೆ 2018ರಲ್ಲಿ ಬಿಜೆಪಿಯಿಂದ ಯಾದಗಿರಿ ಮತಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

ಕಳೆದ 2023ರ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಚನ್ನಾರಡ್ಡಿ ಪಾಟೀಲ್ ವಿರುದ್ಧ ಸ್ಫರ್ಧಿಸಿ ಪರಾಭವಗೊಂಡಿದ್ದರು. ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ದಿ.ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರರಾಗಿದ್ದ ವೆಂಕಟರಡ್ಡಿ ಮುದ್ನಾಳ ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ನಿಧನರಾಗಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ʼಈ ದಿನʼದ ತನಿಖಾ ವರದಿಗೆ ವ್ಯಾಪಕ ಪ್ರಶಂಸೆ; ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯ

ವೆಂಕಟರೆಡ್ಡಿ ಮುದ್ನಾಳ ಅವರ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಯಾದಗಿರಿ ನಗರಕ್ಕೆ ಕರೆತರಲಾಗುತ್ತಿದ್ದು, ಬುಧವಾರ ಸಂಜೆ ಅವರ ಸ್ವಗ್ರಾಮ ಮುದ್ನಾಳ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...