ಇಂಡಿ ತಾಲೂಕಿಗೆ ನಾಲ್ಕು ವಿದ್ಯುತ್ ಉಪಕೇಂದ್ರ ಮಂಜೂರು: ಎಸ್ ಎ ಬಿರಾದಾರ

Date:

ಕರ್ನಾಟಕ ವಿದ್ಯುತ್ ಪ್ರಸಾರ ನಿಗಮದಿಂದ ಇಂಡಿ ತಾಲೂಕಿನ ನಾಲ್ಕು ಕಡೆ 110 ಕೆವಿ ಉಪಕೇಂದ್ರಗಳಿಗೆ ಮಂಜೂರಾತಿ ದೊರೆತಿದೆ ಎಂದು ತಾಲೂಕು ಕಾರ್ಯ ನಿರ್ವಾಹಕ ಅಭಿಯಂತರ ಎಸ್ ಎ ಬಿರಾದಾರ ಮತ್ತು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಎಸ್ ಆರ್ ಮೆಡೆಗಾ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “ಶಿರಗೂರ ಇನಾಂ, ತಾಂಬಾ, ಹಡಲಸಂಗ ಮತ್ತು ಅಗಸನಾಳಗಳಲ್ಲಿ ಮಂಜುರಾತಿ ಆಗಿವೆ. ನಿಂಬಾಳ 110 ಕೆವಿ ಉಪಕೇಂದ್ರ ಪ್ರಗತಿ ಹಂತದಲ್ಲಿದೆ. ಕೇಂದ್ರ ಸ್ಥಾಪನೆಗೆ ಖಾಸಗಿಯವರಿಂದ ಜಾಗ ಪಡೆಯಲಾಗಿದೆ. ತಾಂತ್ರಿಕ ತಂಡದಿಂದ ಜಾಗ ಪರಿಶೀಲನೆ ಮಾತ್ರ ಬಾಕಿ ಇದೆ. ಪ್ರಕ್ರಿಯೆ ಟೆಂಡರ್‌ ಹಂತದಲ್ಲಿದ್ದು, ಹಂತ ಹಂತವಾಗಿ ಕಾಮಗಾರಿ ಆರಂಭಿಸಲು ಗಮನಹರಿಸಲಾಗುವುದು” ಎಂದರು.

“ಈಗಾಗಲೇ ಇಂಡಿ ಎರಡು, ಹಿರೇಬೇವನೂರ, ಲಚ್ಯಾಣ, ಅಥರ್ಗಾ, ತಡವಲಗಾ, ನಾದ ಕೆಡಿ, ತಾಂಬಾ, ಝಳಕಿ, ಹೋರ್ತಿ, ರೋಡಗಿ, ಮಸಳಿ, ನಿಂಬಾಳ, ಸಾತಲಗಾಂವ ಕ್ರಾಸ್, ಬೆರುಣಗಿ 110 ಕೆವಿ ಕೇಂದ್ರಗಳು ಈಗಾಗಲೇ ಚಾಲ್ತಿಯಲ್ಲಿವೆ. ರಾಜ್ಯದಲ್ಲಿಯೇ ವಿಜಯಪುರಕ್ಕೆ ಹೆಚ್ಚು ಕೇಂದ್ರಗಳು ಮಂಜೂರಾಗಿದ್ದು, ಇಂಡಿ ತಾಲೂಕು ರಾಜ್ಯದಲ್ಲಿಯೇ ಅತಿ ಹೆಚ್ಚು ಉಪಕೇಂದ್ರ ಮಂಜುರಾತಿ ಪಡೆದು ಪ್ರಥಮ ಸ್ಥಾನದಲ್ಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ: ಕೇಂದ್ರ ಆದೇಶ

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಮತ್ತು ಕರ್ನಾಟಕ ವಿದ್ಯುತ್ ಪ್ರಸಾರ ನಿಗಮ ಇವರ ಪ್ರಯತ್ನದಿಂದ ಇಂಡಿ ತಾಲೂಕಿಗೆ ನಾಲ್ಕು ಉಪಕೇಂದ್ರಗಳು ಮಂಜೂರಾಗಿವೆ. ಈ ಕಾರ್ಯದಲ್ಲಿ ಸಹಕರಿಸಿದ ಕೆಪಿಟಿಸಿಎಲ್ ಅಧಿಕಾರಿಗಳು ಹಾಗೂ ತಂಡದವರು ಮತ್ತು ಇಂಡಿಯ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ” ಎಂದರು.

“ಕೆಲವೆಡೆ 33/11 ಕೆ ವಿ ಮತ್ತೆ ಕೆಲವೆಡೆ 66/11 ಕೆ ವಿ ಕೇಂದ್ರ ಸ್ಥಾಪನೆಗೆ ಉದ್ದೇಶೀಸಲಾಗಿದೆ. ಉಪಕೇಂದ್ರ ಸ್ಥಾಪನೆಯಿಂದ ವೋಲ್ಟೇಜ್ ಸಮಸ್ಯೆ, ವಿದ್ಯುತ್ ಅಡಚಣೆ ಮೊದಲಾದ ತೊಡಕುಗಳು ಪರಿಹಾರವಾಗಲಿವೆ. ಕೃಷಿ, ತೋಟಗಾರಿಕೆ, ಕೈಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...