ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

Date:

ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.

ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಐರಾವತ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ, ಕಾರು ನಜ್ಜು-ಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಸತ್ಯಾನಂದ ರಾಜೇ ಆರಸ್ (51), ಅವರ ಪತ್ನಿ ನಿಶ್ಚಿತಾ (45), ಚಂದ್ರು (62), ಅವರ ಪತ್ನಿ ಸುವೇದಿನಿ ರಾಣಿ (50) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಬೆಂಬಲ, ವಿರೋಧ: ಏನಿದು ವಿವಾದ?

ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ – ಸಾವಿನ ರಸ್ತೆಯೆಂದೇ ಕರೆಸಿಕೊಂಡಿತ್ತು. ಪೊಲೀಸ್ ಇಲಾಖೆಯ ಅಂಕಿಅಂಶದ ಪ್ರಕಾರ, 2023ರಲ್ಲಿ 523 ರಸ್ತೆ ಅಪಘಾತಗಳು ಸಂಭವಿಸಿದ್ದವು. ಈ ಅಪಘಾತಗಳಲ್ಲಿ 158 ಜನರು ಸಾವನ್ನಪ್ಪಿದ್ದರು. ಅಲ್ಲದೆ, 350ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇನ್ನು, 2024ರಲ್ಲಿ ಜನವರಿಯಿಂದ ಮೇ ಅಂತ್ಯದವರೆಗೆ 125 ಅಪಘಾತಗಳು ಸಂಭವಿಸಿ, 31 ಮಂದಿ ಸಾವಿಗೀಡಾಗಿದ್ದರು. 167 ಮಂದಿ ಗಾಯಗೊಂಡಿದ್ದರು. 2024ರ ಮೇ ನಂತರದ ಅಂಕಿಅಂಶಗಳನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...