ಚಿತ್ರದುರ್ಗ | ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ; ನಾಲ್ವರು ಶಿಕ್ಷಕರ ಅಮಾನತು

Date:

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿ, ಕರ್ತವ್ಯಲೋಪ ಎಸಗಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಶಾಲೆಗಳ ನಾಲ್ವರು ಶಿಕ್ಷಕರು ಅಮಾನತಾಗಿದ್ದಾರೆ.

ಚಳ್ಳಕೆರೆ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ,  ಗೋಸಿಕೆರೆ ಪ್ರೌಢಶಾಲೆಯ ಶಿಕ್ಷಕ ರಾಘವೇಂದ್ರ, ಪಿ ಓಬನಹಳ್ಳಿ ಶಾಲೆಯ ಚಂದ್ರಶೇಖರ್ ಹಾಗೂ ಕೊರ್ಲಕುಂಟೆ ಶಾಲೆಯ ಪ್ರಕಾಶ್ ಅಮಾನತಾಗಿರುವ ಶಿಕ್ಷಕರು. ಚಿತ್ರದುರ್ಗ ಡಿಡಿಪಿಐ ರವಿಶಂಕರರೆಡ್ಡಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 28ರಂದು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಶಿಕ್ಷಕರು ಸಹಕಾರ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...