ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 8,800 ಕೋಟಿ ರೂ. ಹೂಡಿಕೆ, 14,000 ಉದ್ಯೋಗ ಸೃಷ್ಟಿ

Date:

  • ಸಿಎಂ, ಕೈಗಾರಿಕಾ ಸಚಿವರೊಂದಿಗೆ ಫಾಕ್ಸ್ ಕಾನ್ ಕಂಪನಿ ನಿಯೋಗ ಸಭೆ
  • 8,800 ಕೋಟಿ ರೂ ಹೂಡಿಕೆ, 14 ಸಾವಿರ ಉದ್ಯೋಗ ಸೃಷ್ಟಿ ಭರವಸೆ

ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ಸೋಮವಾರ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ” ಎಂದು ವಿವರಿಸಿದರು.

ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (ಎಫ್ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟ್ರಿಯಲ್ ಟೌನ್ ಷಿಪ್ ನಲ್ಲಿ ನಿಯೋಗದ ಸದಸ್ಯರು ಇಂದೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ.

ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ್ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು ‘ಎಂಡ್ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ.

ಈ ಸುದ್ದಿ ಓದಿದ್ದೀರಾ? ದಲಿತರಿಗೆ ಭೂಮಿ ಪರಬಾರೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮಾತನಾಡಿ, “ನಮ್ಮ ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸೆಮಿ‌ ಕಂಡಕ್ಟರ್ ಸೇರಿದಂತೆ ಬೇರೆ ಯಾವುದೇ ಉದ್ದಿಮೆಯನ್ನು ಸ್ಥಾಪಿಸಲು ಬಯಸಿದರೆ ಅಗತ್ಯ ಎಲ್ಲ ನೆರವನ್ನೂ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಎಫ್ಐಐ ಪ್ರಧಾನ ವ್ಯವಸ್ಥಾಪಕರುಗಳಾದ ಮೈಕೇಲ್ ಲಿಂಗ್, ಜೇಸನ್ ಲಾವು, ಆಂಜಿ ಲಿನ್, ನಿರ್ದೇಶಕರಾದ ಸೆಂಥಿಲ್ ಕುಮಾರ, ಭರತ್ ದಂಡಿ ಮತ್ತಿತರರು ಇದ್ದರು.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...