ವಂಚನೆ ಪ್ರಕರಣ | ಚೈತ್ರಾ ಹೆಸರಿನೊಂದಿಗೆ ‘ಕುಂದಾಪುರ’ ಬಳಕೆಗೆ ಆಕ್ಷೇಪ; ಕೋರ್ಟ್‌ನಲ್ಲಿ ದಾವೆ

Date:

ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಅವರು ಜೈಲು ಸೇರಿದ್ದಾರೆ. ಅವರ ಬಗ್ಗೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ‘ಕುಂದಾಪುರ’ ಹೆಸರು ಬಳಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಗರದ ಬಸವನಗುಡಿಯ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ.

ಕುಂದಾಪುರ ಎಂಬುದು ತಾಲೂಕು ಕೇಂದ್ರವಾಗಿದೆ. ಚೈತ್ರಾ ಅವರ ಪೂರ್ಣ ಹೆಸರು ಚೈತ್ರಾ ಕುಂದಾಪುರ ಅಲ್ಲ. ಅವರು ಕುಂದಾಪುರ ತಾಲೂಕಿನವರಾಗಿದ್ದು, ಪಟ್ಟಣದ ಹೆಸರನ್ನು ಅವರ ಹೆಸರಿನೊಂದಿಗೆ ಸೇರಿಸಲಾಗಿದೆ. ಮಾಧ್ಯಮಗಳೂ ಅವರ ಹೆಸರು ಪ್ರಕಟಿಸುವಾಗ ಚೈತ್ರಾ ಕುಂದಾಪುರ ಎಂದು ಉಲ್ಲೇಖಿಸುತ್ತಿವೆ. ಇದರಿಂದ ಪಟ್ಟಣದ ಹೆಸರಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಕುಂದಾಪುರ ಮೂಲದವರೇ ಆದ ಗಣೇಶ್‌ ಶೆಟ್ಟಿ ಅರ್ಜಿಯಲ್ಲಿ ವಿವರಿಸಿದ್ದಾರೆ.

ಕುಂದಾಪುರದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂತಹ ಪಟ್ಟಣದ ಹೆಸರನ್ನು ವಂಚನೆ ಆರೋಪಿ ಹೆಸರಿನೊಂದಿಗೆ ತಳಕು ಹಾಕಬಾರದು. ಸುದ್ದಿಗಳಲ್ಲಿ ಚೈತ್ರ ಕುಂದಾಪುರ ಎಂದು ಬಳಸುವುದು ಪಟ್ಟಣದ ಕುರಿತು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವೆದಾರ ಪರ ವಕೀಲ ಪವನ ಚಂದ್ರ ಶೆಟ್ಟಿ ವಕಾಲತ್ತು ಹಾಕಿದ್ದಾರೆ. ಅರ್ಜಿಯು ಮುಂದಿನ ದಿನಗಳಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...