‘ಅನ್ನಭಾಗ್ಯ’ದಲ್ಲಿ ವಂಚನೆ: ಟ್ವಿಟ್ಟರ್ ದೂರಿಗೆ ಸ್ಪಂದಿಸಿದ ಸಿಎಂ ಕಚೇರಿ; ನ್ಯಾಯಬೆಲೆ ಅಂಗಡಿ ಅಮಾನತು

Date:

  • ದಾವಣಗೆರೆಯ ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿ
  • ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿದ್ದ ಬಗ್ಗೆ ಟ್ವಟ್ಟರ್‌ನಲ್ಲಿ ಬಂದಿದ್ದ ದೂರು

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯ ವಿತರಣೆಯ ವೇಳೆ ವಂಚಿಸುತ್ತಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಬಂದ ದೂರಿಗೆ ಸ್ಪಂದಿಸಿರುವ ಸಿಎಂ ಕಚೇರಿ, ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

ದಾವಣಗೆರೆಯ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಮಳಲಿ ಗ್ರಾಮದಲ್ಲಿ ಪ್ರತಿ ರೇಷನ್ ಕಾರ್ಡಿಗೆ ಒಂದು ಕೆಜಿ ಅಕ್ಕಿ ಕಡಿತ ಮಾಡಿ ನೀಡಲಾಗುತ್ತಿದೆ. ಇದು ತಾಲೂಕಿನಾದ್ಯಂತ ಎಗ್ಗಿಲ್ಲದೇ ನಡೆಯುತ್ತಿದೆ. ಇಂತವರನ್ನು ಅಮಾನತು ಮಾಡಿ ಎಂದು ವಿಡಿಯೋ ದಾಖಲೆ ಸಹಿತ ಸಿಎಂ ಕಚೇರಿಗೆ ಚಂದ್ರಶೇಖರ್ ಎಂಬವರು ಟ್ವೀಟ್ ಮೂಲಕ ದೂರು ನೀಡಿದ್ದರು.

ಇದಕ್ಕೆ ಸ್ಪಂದಿಸಿರುವ ಸಿಎಂ ಕಚೇರಿಯ ಅಧಿಕಾರಿಗಳು, ಸ್ಥಳೀಯ ಅಧಿಕಾರಿಗಳಿಂದ ವರದಿ ಪಡೆದ ಬಳಿಕ ಜಿಲ್ಲಾಧಿಕಾರಿಗಳು ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿಎಂ ಕಚೇರಿಯ ಅಧಿಕಾರಿಗಳು, ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿಯವರು ಪ್ರತಿ ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿರುವ ವಿಷಯವನ್ನು ಚಂದ್ರಶೇಖರ್ ಎನ್ನುವವರು ಟ್ವಿಟ್ಟರ್ ಮೂಲಕ ನಮ್ಮ ಗಮನಕ್ಕೆ ತಂದರು. ದೂರು ಬಂದ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು. ದೂರು ಕೇಳಿಬಂದ ಕೆಲವೇ ಗಂಟೆಗಳ ಒಳಗೆ ಆಹಾರ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿರುತ್ತಾರೆ. ಅವರ ವರದಿ ಆಧರಿಸಿ ಜಿಲ್ಲಾಧಿಕಾರಿಯವರು ನಿಯಮ ಉಲ್ಲಂಘನೆ ಮಾಡಿರುವ ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಿ, ಪಡಿತರ ವಿತರಣೆಗೆ ತಾತ್ಕಾಲಿಕ ವ್ಯವಸ್ಥೆ ಮಾಡಿರುತ್ತಾರೆ” ಎಂದು ತಿಳಿಸಿದೆ.

“ಬಡಜನರ ಹಸಿವು ನೀಗಿಸುವ ಉದ್ದೇಶದ ಪಡಿತರ ವಿತರಣಾ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುವ ಇಂತಹ ಯಾವುದೇ ಘಟನೆಗಳನ್ನು ನಾವು ಸಹಿಸುವುದಿಲ್ಲ. ಜನರಿಗೆ ಅವರ ಹಕ್ಕಿನ ಪಡಿತರ ಸಾಮಗ್ರಿಗಳನ್ನು ಸಿಗುವಂತೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಅವರ ಕಚೇರಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...