ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

Date:

ಪಂಚರ್ ಶಾಪ್ ಒಂದರಲ್ಲಿ ಟೈರಿಗೆ ಗಾಳಿ ತುಂಬುವ ಸಂದರ್ಭ ಟೈರ್ ಸ್ಪೋಟಗೊಂಡು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಬಳಿ ನಡೆದಿದೆ.

ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ.

ಖಾಸಗಿ ಶಾಲೆ ಬಸ್ಸೊಂದರ ಟೈರ್ ಪ್ಯಾಚ್‌ಗೆಂದು ಬಂದಿದ್ದು, ಟಯರನ್ನು ಕೆಳಗಿಳಿಸಿ ಗಾಳಿ ತುಂಬುವಾಗ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈರ್ ಸಿಡಿದು ಸ್ಪೋಟಗೊಂಡಿದೆ. ಈ ಸಂದರ್ಭ ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟಗೊಂಡ ಟೈಯರ್‌ನ ಸಿಡಿತಕ್ಕೆ ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೈರ್ ಸ್ಫೋಟಗೊಂಡ ಬಳಿಕ ಟೈಯರ್ ಡ್ರಮ್ ಬಸ್ಸಿನ ಮೇಲ್ಚಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಪಕ್ಕದಲ್ಲೇ ಇರುವ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಗಂಭೀರ ಗಾಯಗೊಂಡಿರುವ ಯುವಕ ಅಬ್ದುಲ್ ರಜೀದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...