ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಜೂನ್ 11 ರಾಜ್ಯಾದ್ಯಂತ ಏಕ‌ಕಾಲಕ್ಕೆ ಯೋಜನೆಗೆ ಚಾಲನೆ

Date:

  • ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು: ಸಿಎಂ ಸಿದ್ದರಾಮಯ್ಯ
  • ‘ಶಾಸಕರು, ಜಿಲ್ಲಾ ಸಚಿವರು ತಮ್ಮ ಜಿಲ್ಲೆ, ಕ್ಷೇತ್ರದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ’

ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ.

“ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು” ಎಂದು ಸಚಿವರು ಮತ್ತು ಶಾಸಕರುಗಳಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

“ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು. ಬೆಂಗಳೂರಿನಲ್ಲಿ ನಾನು ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...