ಚಿಕ್ಕಬಳ್ಳಾಪುರ | ಮೇ 20ರಂದು ಉಚಿತ ಪ್ಲಾಸ್ಟಿಕ್‌ ಸರ್ಜರಿ ಶಿಬಿರ

Date:

ಸುಟ್ಟ ಗಾಯ, ಆಸಿಡ್ ದಾಳಿ, ವಿದ್ಯುತ್ ಅಪಘಾತಗಳಿಂದಾದ ಗಾಯಗಳನ್ನು ಪ್ಲಾಸ್ಟಿಕ್‌ ಸರ್ಜರಿ ಮೂಲಕ ಸರಿಪಡಿಸುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಇದೇ ಮೇ 20ರಂದು ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿರುವ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಫ್ರೆಂಡ್ಸ್ ವೆಲ್ಫೇರ್ ಆರ್ಗನೈಜೇಷನ್‌ನ ಅಧ್ಯಕ್ಷ ದೀಪೇಂದ್ರ ದೇವ್‌ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಟ್ಟ ಗಾಯಗಳಿಂದ ಸಾರ್ವಜನಿಕರೊಂದಿಗೆ ಬೆರೆಯಲು ಸಾಧ್ಯವಾಗದೆ ಅದೆಷ್ಟೋ ಜನ ಪರಿತಪಿಸುತ್ತಿದ್ದಾರೆ. ಇನ್ನು ಯಾವುದೋ ಕ್ಷುಲ್ಲುಕ ಕಾರಣಕ್ಕೆ ಆಸಿಡ್ ದಾಳಿಯಾಗಿ ಸುಂದರ ಮುಖ ವಿಕಾರವಾಗಿ ಸಾರ್ವಜನಿಕವಾಗಿ ಮುಖ ತೋರಿಸದೆ ನೊಂದವರು ಎಷ್ಟೋ ಮಂದಿ. ಇನ್ನು ವಿದ್ಯುತ್ ಆಘಾತ ಸೇರಿ ಇತರೆ ಸಮಸ್ಯೆಗಳಿಂದಲೂ ಮುಖ ಸೇರಿ ದೇಹದ ಯಾವುದೇ ಭಾಗದಲ್ಲಿ ಗಾಯಗಳಾಗಿ, ಇದರಿಂದ ಸಾರ್ವಜನಿಕರೊಂದಿಗೆ ಬೆರೆಯಲಾಗದೆ ಪರದಾಡುತ್ತಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಸಲುವಾಗಿ ಶಿಬಿರ ಆಯೋಜಿಸಿರುವುದಾಗಿ ತಿಳಿಸಿದರು.

ಎಲ್ಲ ರೀತಿಯ ಸುಟ್ಟ ಗಾಯಗಳಿಗೂ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ಸಮಾಜಕ್ಕೆ ಸೇವೆ ಮಾಡಬೇಕು ಎಂಬ ಉದ್ಧೇಶದಿಂದ ಉಚಿತವಾಗಿ ಈ ಪ್ಲಾಸ್ಟಿಕ್ ಸರ್ಜರಿ ಶಿಬಿರ ನಡೆಸಲಾಗುತ್ತಿದೆ. ಕಳೆದ 28 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಈ ಬಾರಿ 28ನೇ ವರ್ಷದ ಪ್ಲಾಸ್ಟಿಕ್ ಸರ್ಜರಿ ಶಿಬಿರ ನಡೆಯುತ್ತಿದೆ. ಈವರೆಗೆ ಸುಮಾರು 4500 ಮಂದಿ ರೋಗಿಗಳಿಗೆ ಉಚಿತವಾಗಿ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ವರ್ಷವೂ ರಾಜ್ಯ ಹಾಗೂ ಹೊರರಾಜ್ಯಗಳಿಂದ ಶಿಬಿರದಲ್ಲಿ ಹಲವು ಮಂದಿ ಭಾಗವಹಿಸುತ್ತಿದ್ದು, ಎಲ್ಲವೂ ಉಚಿತವಾಗಿರಲಿದೆ. ಪ್ಲಾಸ್ಟಿಕ್ ಸರ್ಜರಿ, ಆಸ್ಪತ್ರೆ ವೆಚ್ಚ ಸೇರಿ ಎಲ್ಲವೂ ಉಚಿತವಾಗಿರಲಿದೆ. ಇನ್ನು ಹೊರಗೆ ಯಾರಾದರೂ ಇದೇ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಬೇಕಾದರೆ ಕನಿಷ್ಠ 2.5 ಲಕ್ಷದಿಂದ 5 ಲಕ್ಷದವರೆಗೆ ವೆಚ್ಚವಾಗಲಿದೆ. ಹಾಗಾಗಿ ಇಲ್ಲಿ ಸಂಪೂರ್ಣ ಉಚಿತವಾಗಿರುವ ಕಾರಣ ಆರ್ಥಿಕವಾಗಿ ಹಿಂದುಳಿದವರು ಶಿಬಿರದ ಸದುಪಯೋಗಪಡೆಯಬಹುದು ಎಂದು ಹೇಳಿದರು.

ಆಸಕ್ತರು ಮೊ.ಸಂಖ್ಯೆ: 9880307780, 9148741707 ಕರೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಕುಂತಲ್‌ ಶಾ, ಪಾಯಲ್ ಶಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...