ತಿಪಟೂರಿನಲ್ಲಿ ಉಚಿತ ಕೌಶಲ್ಯ ತರಬೇತಿ ಕೇಂದ್ರ ಕಾರ್ಯಾರಂಭ

Date:

ತಿಪಟೂರು ತಾಲೂಕಿನ  ಯುವಜನತೆಯ ಉದ್ಯೋಗಾರ್ಹತೆ ಹೆಚ್ಚಿಸಲು ಇಲ್ಲಿನ ಸತ್ಯಕುಮಾರ್ ರಿಲೀಫ್ ಫೌಂಡೇಷನ್ ವತಿಯಿಂದ  ಸ್ಥಾಪಿಸಲಾಗಿರುವ ಸಂಪೂರ್ಣ ಉಚಿತ ಕೌಶಲ ತರಬೇತಿ ಕೇಂದ್ರ ಗುರುವಾರ ಕಾರ್ಯಾರಂಭಗೊಂಡಿತು. 

ಇಂದು ಮೊದಲ ಬ್ಯಾಚಿನ ಅಭ್ಯರ್ಥಿಗಳಿಗೆ ತರಬೇತಿ ಆರಂಭಗೊಳ್ಳುತ್ತಿದ್ದು, ಇದು ಶೇಕಡ ನೂರರಷ್ಟು ಉದ್ಯೋಗ ಗ್ಯಾರಂಟಿಯೊಂದಿಗೆ ರೂಪಿಸಿರುವ 35 ದಿನಗಳ ಉಚಿತ ತರಬೇತಿ ಕಾರ್ಯಕ್ರಮವಾಗಿದೆ. ಎಸ್ ಎಸ್ ಎಲ್ ಸಿ, ಡಿಪ್ರೊಮಾ ಮತ್ತು ಪದವಿ ಪಾಸ್ ಅಥವಾ ಫೇಲ್ ಆದವರಿಗೆ ತರಬೇತಿಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಟ್ಯಾಲಿ, ಸ್ಪೋಕನ್ ಇಂಗ್ಲಿಷ್, ಕಂಪ್ಯೂಟರ್, ಜಿ ಎಸ್ ಟಿ, ಜೀವನ ಕೌಶಲ್ಯ ಗಳು, ಆಪ್ತ ಸಮಾಲೋಚನೆ ಹಾಗೂ ಆತ್ಮವಿಶ್ವಾಸ ವೃದ್ಧಿಗೆ ಆದ್ಯತೆ ನೀಡುವ ಮೂಲಕ ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ಸಜ್ಜುಗೊಳಿಸಲಾಗುತ್ತದೆ ಎಂದು ಶ್ರೀಧರ್ ವಿವರಿಸಿದರು.

1001078605

 ಶಾಸಕ ಕೆ ಷಡಕ್ಷರಿ ಅವರು ಮಾತನಾಡಿ, “ಸತ್ಯಕುಮಾರ್ ಪ್ರತಿಷ್ಠಾನ, ಎಂ ಜೆ ಎಸ್ ಪಿ ಆರ್ ಮತ್ತು ಉನ್ನತಿ ಸಂಸ್ಥೆಯ ಸಹಯೋಗದಲ್ಲಿ ಈ ಕೌಶಲ್ಯ ಕೇಂದ್ರ ಸ್ಥಾಪಿಸಿ ಶ್ಲಾಘನೀಯ ಕಾರ್ಯ ಮಾಡಿದೆ. ಪ್ರಸ್ತುತ ಉದ್ದಿಮೆಗಳ ನಿರೀಕ್ಷೆಗಳಿಗೆ ಅನುಗುಣವಾಗಿ ಯುವಜನತೆಯಲ್ಲಿ ಕೌಶಲಗಳನ್ನು ಮೈಗೂಡಿಸಬೇಕೆಂಬುದೇ ಈ ಉಪಕ್ರಮದ ಉದ್ದೇಶವಾಗಿದ್ದು, ಇಲ್ಲಿನ ಯುವಜನತೆ ಇದರ ಸದ್ಬಳಕೆ ಮಾಡಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉನ್ನತಿ ಪ್ರತಿಷ್ಠಾನವು ರಾಷ್ಟ್ರೀಯ ಕೌಶಲಾಭಿವೃದ್ಧಿ ಮಂಡಳಿಯಿಂದ (ನ್ಯಾಷನಲ್ ಸ್ಕಿಲ್ ಡೆವಲಪ್ ಮೆಂಟಲ್ ಕೌನ್ಸಿಲ್) ಮಾನ್ಯತೆ ಹೊಂದಿದ್ದು, ದೇಶದಾದ್ಯಂತ 38 ಕೌಶಲ ಕೇಂದ್ರಗಳನ್ನು ಸ್ಥಾಪಿಸಿದೆ. ಸಂಸ್ಥೆಯು ವಿವಿಧ ಮುಂಚೂಣಿ ಕಂಪನಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಈವರೆಗೆ 70,000ಕ್ಕೂ ಹೆಚ್ಚು ಜನರನ್ನು ತರಬೇತಿಯೊಂದಿಗೆ ಸಜ್ಜುಗೊಳಿಸಿ ಉದ್ಯೋಗ ಲಭ್ಯವಾಗಿಸಿದೆ ಎಂದು ಎಂ ಜೆ ಎಸ್ ಪಿ ಆರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್  ಎಂ ಜೆ ಶ್ರೀಕಾಂತ್ ಹೇಳಿದರು.

ಕಾರ್ಯಕ್ರಮದಲ್ಲಿ ಫೌಂಡೇಷನ್ ನ ಟ್ರಸ್ಟಿ ಡಾ.ಜಿ.ಎಸ್.ಶ್ರೀಧರ್, ಶಂಕರ ಕಿಯೋನಿಕ್ಸ್ ಸಂಸ್ಥೆಯ ಶಿವಪ್ರಕಾಶ್, ಉನ್ನತಿ ತರಬೇತುದಾರರಾದ ತೃಪ್ತಿ, ಚೇತನಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...