ಮುಂಡಗೋಡ | ಅಂತರ ಜಿಲ್ಲಾ ಮನೆಗಳ್ಳನ ಬಂಧನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

Date:

ಮುಂಡಗೋಡ: ಇಲ್ಲಿನ ಅಂಬೇಡ್ಕರ್ ಓಣಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮುಂಡಗೋಡ ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಅಂತರ ಜಿಲ್ಲಾ ಮನೆಗಳ್ಳನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಘಟನೆಯ ಹಿನ್ನೆಲೆ: ಕಳೆದ ಜನವರಿ 27ರಂದು ಮುಂಡಗೋಡ ಪಟ್ಟಣದ ಅಂಬೇಡ್ಕರ್ ಓಣಿಯ ನಿವಾಸಿ ಬಸವರಾಜ ಮಲ್ಲಪ್ಪ ಚಲವಾದಿ ಅವರು ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ಹೊರಬಿಡಗೆಂದು ಮನೆಗೆ ಕೀಲಿ ಹಾಕಿ ಹೋಗಿರುವ ಸಂದರ್ಭದಲ್ಲಿ, ಮನೆಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ್ದರು.

ಬೀರುವಿನಲ್ಲಿದ್ದ ಸುಮಾರು 2.44 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ, ಉಂಗುರ, ಲಕ್ಷ್ಮಿ ಲೋಕೆಟ್ ಸೇರಿದಂತೆ ವಿವಿಧ ಆಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಜನವರಿ 31ರಂದು ಬೆಳಗಿನ ಜಾವ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದ ಹೊನ್ನಳ್ಳಿಯ ಮಂಜುನಾಥ ಬಸವಂತಪ್ಪ ನಾಯಕ (34) ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಅಂದಾಜು 2,44,000 ರೂಪಾಯಿ ಮೌಲ್ಯದ 14 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಕೂಲಿ ಕೆಲಸ ಮಾಡಿಕೊಂಡಿದ್ದು, ಅಂತರ ಜಿಲ್ಲಾ ಮಟ್ಟದಲ್ಲಿ ಕಳ್ಳತನಗಳಲ್ಲಿ ಭಾಗಿಯಾಗುತ್ತಿದ್ದ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ| ರಿಶೆಲ್ ಕಿಸ್ತೋದ್ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಚಿರಾಗ್ ಚೆನ್ನೈನಲ್ಲಿ ಬಂಧನ

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ.ಎನ್. ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಮುಂಡಗೋಡ ಪೊಲೀಸ್ ನಿರೀಕ್ಷಕ ರಂಗನಾಥ ನೀಲಮ್ಮನವರ ನೇತೃತ್ವದ ವಿಶೇಷ ತಂಡವು ತನಿಖೆ ಕೈಗೊಂಡಿತ್ತು. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಮುಂಡಗೋಡ ಪೋಲಿಸ್ ಠಾಣೆ ಸಿಬ್ಬಂದಿಗಳಾದ ಮಂಜುನಾಥ ಚಿಂಚಲಿ, ಕೋಟೇಶ ನಾಗರಹಳ್ಳಿ, ಅಣ್ಣಪ್ಪ ಬೂದಿಗೆರೆ, ತಿರುಪತಿ ಚೌಡಣ್ಣನವರ, ಬಸವರಾಜ ಲಂಬಾಣಿ ಮತ್ತು ಕಲ್ಲಪ್ಪ ಹೊನ್ನಿಹಳ್ಳಿ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...