ಗದಗ | 13 ಶಿಶುಪಾಲನಾ ಕೇಂದ್ರಗಳ ಆರಂಭ

Date:

ಗದಗ ತಾಲೂಕಿನಲ್ಲಿ ಆ.15ರಂದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಅಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ ಮಕ್ಕಳಿಗಾಗಿ 13 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭಗೊಳ್ಳಲಿವೆ ಎಂದು ಗದಗ ಜಿಲ್ಲಾ ಪಂಚಾಯತ್‌ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉದ್ಘಾಟನಾ ಹೊಸ್ತಿಲಲ್ಲಿ ಇರುವ ಶಿಶುಪಾಲನಾ ಕೇಂದ್ರಗಳನ್ನು ಪರಿಶೀಲಿಸಿ ಮಾತನಾಡಿದರು. “ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರ ಕೂಸಿನ ಮನೆ (ಶಿಶುಪಾಲನಾ ಕೇಂದ್ರ)ಯನ್ನು ಆರಂಭಿಸುತ್ತಿದೆ. ಅದಕ್ಕಾಗಿ ಗದಗ ತಾಲೂಕಿನಲ್ಲಿ ಯೋಜನೆಯ ಸಾಕಾರಕ್ಕೆ ಸಕಲ ಸಿದ್ಧತೆ ನಡೆದಿದ್ದು, ಪ್ರಸ್ತುತ 13 ಗ್ರಾಮ ಪಂಚಾಯಿತಿಗಳಲ್ಲಿ 13 ‘ಕೂಸಿನ ಮನೆ’ಗಳು ಚಾಲನೆಗೆ ಸಜ್ಜಾಗಿ ನಿಂತಿವೆ” ಎಂದು ಹೇಳಿದರು.

“ಗ್ರಾಮ ಮಟ್ಟದಲ್ಲಿ ಮನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಶಿಶುಪಾಲನಾ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಸನ್ನ‌ದ್ಧವಾಗಿದೆ. ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನಾ ‘ಕೂಸಿನ ಮನೆ’ ಸ್ಥಾಪನೆಯ ಉದ್ದೇಶವಾಗಿದೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನರೇಗಾ ಅಡಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದ ಇತರ ಕೆಲಸಗಳಲ್ಲಿ ತೊಡಗಿರುವ ತಾಯಂದಿರ 6 ತಿಂಗಳಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತವಾಗಿ ಪೋಷಣೆ ಮಾಡುವ ಉದ್ದೇಶದಿಂದ ‘ಕೂಸಿನ ಮನೆ’ ಯೋಜನೆ ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.

13 ಕೂಸಿನ ಮನೆ: ಗದಗ ತಾಲೂಕಿನ 27 ಗ್ರಾಪಂಗಳ ಪೈಕಿ ಆಯ್ದ 13 ಗ್ರಾಮ ಪಂಚಾಯಿತಿಗಳಲ್ಲಿ ಮನರೇಗಾ ಯೋಜನೆ ಮತ್ತು ಇತರ ಯೋಜನೆಗಳ ಒಗ್ಗೂಡಿಸುವಿಕೆ ಮೂಲಕ ಪ್ರತಿ ದಿನ 6ರಿಂದ 8 ತಾಸುಗಳ ಕಾಲ ಕೇಂದ್ರಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಕೂಸಿನ ಮನೆ’ಗಳು ಕಾರ್ಯ ನಿರ್ವಹಿಸಲಿವೆ.

ಈ ಸುದ್ದಿ ಓದಿದ್ದೀರಾ? ಬಡವರು ವಾಸಿಸುತ್ತಿರುವ ಜಾಗಕ್ಕೆ ಅವರೇ ಮಾಲೀಕರು: ಮಾಜಿ ಸಚಿವ ಎಚ್ ಆಂಜನೇಯ

ಗದಗ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಎಚ್ ಎಸ್ ಜನಗಿ ಮಾತನಾಡಿ, “ರಾಜ್ಯ ಸರ್ಕಾರವು ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಜವಾಬ್ದಾರಿ ಪ್ರತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ” ಎಂದು ತಿಳಿಸಿದರು.

ಕೇಂದ್ರದಲ್ಲಿ ಏನೇನಿದೆ?

“ಶಿಶುಪಾಲನಾ ಕೇಂದ್ರಗಳಲ್ಲಿ ಮೊದಲು ಸುಸಜ್ಜಿತ ಕಟ್ಟಡ, ನೀರು, ಗಾಳಿ ಬೆಳಕು, ಶೌಚಾಲಯ ವ್ಯವಸ್ಥೆ ಇರಬೇಕು. ಜತೆಗೆ ಮಕ್ಕಳಿಗೆ ಆಟದ ಸಾಮಗ್ರಿಗಳು, ಕಲಿಕಾ ಸಾಮಗ್ರಿಗಳನ್ನು ಒಳಗೊಂಡಿರಲಿದೆ” ಎಂದು ಅಧಿಕಾರಿಗಳು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...