ಗದಗ | ನಿರಂತರ ಮಳೆಯಿಂದ 192 ಮನೆಗಳು ಹಾನಿ

Date:

ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಒಂದು ಕಡೆ ರೈತರಿಗೆ ಸಂತೋಷವಾದರೆ, ಇನ್ನೊಂದು ಕಡೆ ನಾಗರಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯಿಂದ ಎಷ್ಟೋ ಮನೆಗಳು, ಕುಸಿದ ಗೋಡೆಗಳು ಹಾನಿಗೀಡಾಗಿದ್ದು, ಸ್ಥಳಿಯರನ್ನು ಸಂಕಷ್ಟಕ್ಕೆ ದೂಡಿದೆ.

ಗದಗ ಜಿಲ್ಲೆಯಲ್ಲೂ ನಿರಂತರ ಮಳೆಯಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿವೆ. ಜಿಲ್ಲೆಯಲ್ಲಿ ಜುಲೈ 1 ರಿಂದ 28ರವರೆಗೆ 118 ಮಿಮೀ ಮಳೆಯಾಗಿದೆ. ವಾಡಿಕೆ ಮಳೆ 61 ಮಿಮೀ ಇದ್ದು ಶೇ.93 ರಷ್ಟು ಮಳೆ ಹೆಚ್ಚಾಗಿದೆ.

ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 192 ಮನೆಗಳು ಭಾಗಶಃ ಹಾನಿಗೀಡಾಗಿವೆ. ತಾಲೂಕುವಾರು ನೋಡುವುದಾದರೆ, ಗದಗ-73, ಗಜೇಂದ್ರಗಡ-15, ಲಕ್ಷ್ಮೇಶ್ವರ-46, ಮುಂಡರಗಿ-8, ನರಗುಂದ-19, ರೋಣ-4, ಶಿರಹಟ್ಟಿ-27 ಮನೆಗಳು ಹಾನಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂತರ ಮಳೆಯಿಂದ ಬಹುತೇಕೆರು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಕೂಡಲೇ ಸರ್ಕಾರವು ಗದಗ ಜಿಲ್ಲೆಯಾದ್ಯಂತ ಹಾನಿಗೊಳಗಾದ ಮನೆಗಳಿಗೆ ಸೂಕ್ತ ಪರಿಹಾರ ಕೊಡಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ; ಸೇತುವೆ ಮುಳುಗಡೆ

ಜಲಾಶಯ ಮಟ್ಟ: ನವಿಲು ತೀರ್ಥ ಜಲಾಶಯ 37.785 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈವರೆಗೆ 18.311 ಟಿಎಂಸಿ ನೀರು ಸಂಗ್ರಹವಾಗಿದೆ. ನೀರಿನ ಒಳ ಹರಿವು 12,821 ಕ್ಯೂಸೆಕ್‌ ಇದ್ದು, ಹೊರ ಹರಿವು 194 ಕ್ಯೂಸೆಕ್ ಇದೆ. ಭದ್ರಾ ಜಲಾಶಯ 71.535 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈವರೆಗೆ 38,271 ಟಿಎಂಸಿ ನೀರು ಸಂಗ್ರಹವಾಗಿದೆ. ನೀರಿನ ಒಳ ಹರಿವು 16,041 ಕ್ಯೂಸೆಕ್ ಇದ್ದು, ಹೊರ ಹರಿವು 185 ಕ್ಯೂಸೆಕ್ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...