ಗದಗ | ಅಂಗಾಂಗ ದಾನ ಜಿಲ್ಲೆಗೆ 4ನೇ ಸ್ಥಾನ: ಸಚಿವ ಎಚ್ ಕೆ ಪಾಟೀಲ

Date:

“ಅಂಗಾಂಗ ದಾನದಲ್ಲಿ ಗದಗ ಜಿಲ್ಲೆ 4ನೇ ಸ್ಥಾನದಲ್ಲಿ ಇರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ. 20ನೇ ಸ್ಥಾನದಲ್ಲಿದ್ದ ಗದಗ 4ನೇ ಸ್ಥಾನಕ್ಕೆ ಹೋಗಲು ಪ್ರತಿಯೊಬ್ಬರ ಒಟ್ಟು ಪ್ರಯತ್ನ ಕಾರಣವಾಗಿದೆ” ಎಂದು ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.

ಗದಗ ಪಟ್ಟಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಅದರ ಅಂಗ ಸಂಸ್ಥೆಗಳಾದ ಗದಗ ಜಿಲ್ಲೆಯ ಮೆಡಿಕಲ್, ಫಾರ್ಮಸಿ, ನರ್ಸಿಂಗ್, ಆಯುರ್ವೇದ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಅಂಗಾಂಗದಾನ ಮತ್ತು ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಅಂಗಾಂಗ ದಾನದ ಬಗ್ಗೆ ಗದಗ ಜಿಲ್ಲೆಯಲ್ಲಿ ಚಳುವಳಿಯ ರೂಪದಲ್ಲಿ ಜಾಗೃತಿಯನ್ನು ಮೂಡಿಸಿದ ಕೀರ್ತಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ. ಕುಲಪತಿಗಳಾದ ಡಾ. ಬಿ.ಸಿ. ಭಗವಾನ್ ಅವರಿಗೆ ಗದಗಿನ ಮೇಲೆ ಹೆಚ್ಚು ಪ್ರೀತಿ. ಗದಗ ಜಿಲ್ಲೆಯನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆಯುತ್ತೇವೆ. ಜಿಲ್ಲೆಗೂ ಸಹಕಾರಿ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ. ಜಿಲ್ಲೆಯ ಸಹಕಾರ ಕ್ಷೇತ್ರದ ಚಳುವಳಿಯಲ್ಲಿ ನಮ್ಮ ತಂದೆ ಕೆ.ಎಚ್. ಪಾಟೀಲ್ ಹಾಗೂ ಬಿ.ಎಸ್. ವಿಶ್ವನಾಥ್ ಅವರ ಹೆಸರು ಮುಂಚೂಣಿಯಲ್ಲಿವೆ. ಕುಲಪತಿಗಳಾದ ಬಿ.ಸಿ. ಭಗವಾನ್ ಅವರು ವಿ.ಎಸ್. ವಿಶ್ವನಾಥ್ ಅವರ ಅಳಿಯ. ಈ ನಂಟೇ ಅವರನ್ನು ಗದಗ ಜಿಲ್ಲೆಯ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಲು ಪ್ರೇರಣೆಯಾಗಿದೆ” ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಬಿ.ಸಿ.ಭಗವಾನ್ ಮಾತನಾಡಿ, “ಸ್ವಸ್ಥ ಸಮಾಜ ನಿರ್ಮಾಣ ನಮ್ಮೆಲ್ಲರ ಆದ್ಯತೆಯಾಗಬೇಕು. ಆರೋಗ್ಯವಂತ ಯುವಕರು ಮಾತ್ರ ಸ್ವಸ್ಥ ಸಮಾಜವನ್ನು ಕಟ್ಟಬಲ್ಲರು. ಹೀಗಾಗಿ ಯುವಕರನ್ನು ಆರೋಗ್ಯಪೂರ್ಣ ಜೀವನದತ್ತ ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದರು.

“ವಿದ್ಯಾರ್ಥಿಗಳನ್ನು ಹಾಗೂ ವೈದ್ಯಕೀಯ ವೃತ್ತಿಪರರನ್ನು ಗಮನದಲ್ಲಿ ಇಟ್ಟುಕೊಂಡು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯವು ನಶಾಮುಕ್ತ ಭಾರತ ಹಾಗೂ ಅಂಗಾಂಗ ದಾನ ಸೇರಿದಂತೆ ಹಲವಾರು ಅಭಿಯಾನಗಳನ್ನು ರಾಜ್ಯವ್ಯಾಪಿಯಾಗಿ ಹಮ್ಮಿಕೊಳ್ಳಲು ಮುಂದಾಗಿದೆ. ಈ ಪ್ರಯತ್ನವನ್ನು ಗದಗ ಜಿಲ್ಲೆಯಿಂದ ಆರಂಭಿಸುತ್ತಿರುವುದು ಸಂತಸ ತಂದಿದೆ” ಎಂದರು. 

“ದೇಶದ ಭವಿಷ್ಯವನ್ನು ನಿರ್ಧರಿಸುವ ಯುವಕರನ್ನು ನಶೆಯ ಹಿಡಿತದಿಂದ ಆಚೆ ತಂದರೆ ದೇಶದ ಅಭಿವೃದ್ಧಿ ನಿಶ್ಚಯವಾಗಿ ಆಗುತ್ತದೆ. ಈ ನಿಟ್ಟಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ನಶಾಮುಕ್ತ ಕ್ಯಾಂಪಸ್ ನಿರ್ಮಿಸುವ ಧ್ಯೇಯೋದ್ದೇಶವನ್ನು ಹೊಂದಿದೆ” ಎಂದರು. 

“ದೇಶದಲ್ಲಿ ಕಳೆದ ವರ್ಷ ಸುಮಾರು 17ರಿಂದ 18 ಸಾವಿರ ಅಂಗಾಂಗ ಕಸಿ ಮಾಡಲಾಗಿದೆ. ಆದರೆ, ಅಂಗಾಂಗ ಕಸಿಗಾಗಿ ಕಾಯುತ್ತಿರುವ ರೋಗಿಗಳ ಸಂಖ್ಯೆ 2ಲಕ್ಷಕ್ಕೂ ಅಧಿಕ. ಹೆಚ್ಚು ಹೆಚ್ಚು ಜನರು ಅಂಗಾಂಗ ದಾನ ಮಾಡಲು ಮುಂದೆ ಬರಬೇಕು. ಅದಕ್ಕೆ ನಾವು ಪ್ರೇರಣೆಯಾಗಬೇಕು ಎನ್ನುವುದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಶಯವಾಗಿದೆ. ಎಲ್ಲರೂ ಈ ಬಗ್ಗೆ ಮಾಹಿತಿ ತಿಳಿದುಕೊಂಡು, ತಮ್ಮವರಲ್ಲಿಯೂ ಜಾಗೃತಿ ಮೂಡಿಸಬೇಕು. ಸ್ನೇಹಿತರು, ಬಂಧುಗಳು, ಕುಟುಂಬ ಹಾಗೂ ಪರಿಚಿತರನ್ನು ಅಂಗಾಂಗ ದಾನಕ್ಕೆ ಪ್ರೇರೇಪಿಸಬೇಕು” ಎಂದು ಸಲಹೆ ನೀಡಿದರು.

ಹಾಲ್ಟ್ ಸಾಲ್ಟ್ ಅಭಿಯಾನ : ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿ ಉಪ್ಪಿನ ಸೇವನೆಗೆ ಕಡಿವಾಣ ಹಾಕಲು ’ಹಾಲ್ಟ್ ಸಾಲ್ಟ್’ ಅಭಿಯಾನವನ್ನು ಕೈಗೊಳ್ಳಲಾಗಿದೆ. ಉಪ್ಪಿನ ಬಳಕೆಯನ್ನು ಕಡಿಮೆ ಮಾಡಲು ಪ್ರೇರೇಪಿಸುವುದು ಈ ಅಭಿಯಾನದ ಉದ್ದೇಶ. ನಾವು ಪ್ರತಿದಿನ ಶೇ 5ರಷ್ಟು ಉಪ್ಪನ್ನು ಬಳಸಬೇಕು ಎನ್ನುವ ಎಚ್ಚರಿಕೆಯನ್ನು ಮೀರಿ ಶೇ 20ರಿಂದ 30ರಷ್ಟು ಹೆಚ್ಚು ಪ್ರಮಾಣದ ಉಪ್ಪನ್ನು ಆಹಾರದಲ್ಲಿ ಬಳಸುತ್ತೇವೆ. ಇದರಿಂದ ಜನರಲ್ಲಿ, ಅದರಲ್ಲೂ ಮುಖ್ಯವಾಗಿ ಯುವಸಮುದಾಯದಲ್ಲಿ ಬ್ರೇನ್ ಸ್ಟ್ರೋಕ್, ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಅಧಿಕ ರಕ್ತದ ಒತ್ತಡದಂತಹ ಜೀವನ ಶೈಲಿ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿವೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸೌಜನ್ಯ ಪ್ರಕರಣ; ನ್ಯಾಯ ಒದಗಿಸುವಲ್ಲಿ ಎಲ್ಲ ಸರಕಾರಗಳು ವಿಫಲ: ಬಸವರಾಜ ಪೂಜಾರ

ಕೆ.ಎಚ್.ಪಾಟೀಲ ಕ್ರೀಡಾಂಗಣದಿಂದ ಆರಂಭವಾದ ವಾಕ್ ಥಾನ್ ಗಾಂಧಿ ಸರ್ಕಲ್ ಮೂಲಕ ಹಳೇ ಡಿ.ಸಿ ಕಚೇರಿ ಸರ್ಕಲ್ ವರೆಗೆ ಸಾಗಿತು.

ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಕೆ.ಎಚ್. ಪಾಟೀಲ್ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಎಚ್. ಕೆ. ಪಾಟೀಲ್ ಸೇವಾ ತಂಡದ ಅಧ್ಯಕ್ಷರಾದ ಪ್ರಭು ಎಲ್. ಬುರಬುರೆ ,ಗದಗ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ಎಸ್. ಎಸ್. ನೀಲಗುಂದ , ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಕಿರಣ ಕುಳಗೇರಿ, ಡಾ. ಜೀವನ್ನವರ್, ಸೆನೆಟ್ ಸದಸ್ಯರಾದ ಡಾ. ವಿರೇಶ ಹಂಚಿನಾಳ, ಡಾ. ಜಗದೀಶ ಕೋನರೆಡ್ಡಿ, ಡಾ. ಸಂಕನಗೌಡ ಪಾಟೀಲ್, ಡಾ. ಸಂತೋಷ ಇಂಡಿ ಹಾಜರಿದ್ದರು. ಗದಗ ಜಿಲ್ಲೆಯ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು, ಅದ್ಯಾಪಕರು ಹಾಗೂ ಸಿಬ್ಬಂದಿ ಜಾಥಾದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...