“ದೀಪಾವಳಿ ಹಬ್ಬದಲ್ಲಿ ಜೂಜಾಟ ಆಡುತ್ತಿದ್ದ 463 ಮಂದಿ ಮೇಲೆ 61 ಪ್ರಕರಣಗಳನ್ನು ದಾಖಲಿಸಿ, ₹5.15 ಲಕ್ಷ ಹಣ ಜಪ್ತಿ ಮಾಡಲಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.
ಗದಗ ಶಹರ, ಗ್ರಾಮೀಣ ಸೇರಿದಂತೆ ಜಿಲ್ಲೆಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿದ್ದು, “ಅ.20ರಿಂದ 22ರವರೆಗೆ ಜಿಲ್ಲೆಯಾದ್ಯಂತ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.
ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ 8 ಪ್ರಕರಣ ದಾಖಲಿಸಿ, ₹2.03 ಲಕ್ಷ ವಶಕ್ಕೆ ಪಡೆಯಲಾಗಿದೆ. 93 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗದಗ ಶಹರ ಠಾಣೆ ವ್ಯಾಪ್ತಿಯಲ್ಲಿ 6 ಪ್ರಕರಣ ದಾಖಲಿಸಿ, ₹31 ಸಾವಿರ ವಶಕ್ಕೆ ಪಡೆಯಲಾಗಿದೆ.
ಅದೇ ರೀತಿ, ಶಿರಹಟ್ಟಿ ತಾಲ್ಲೂಕಿನಲ್ಲಿ 12 ಪ್ರಕರಣಗಳಲ್ಲಿ ₹54 ಸಾವಿರ ವಶಕ್ಕೆ ಪಡೆದು 86 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
“ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ 5, ರೋಣ ಠಾಣೆ ವ್ಯಾಪ್ತಿಯಲ್ಲಿ 6, ಗಜೇಂದ್ರಗಡ 5, ಬೆಟಗೇರಿ ಬಡಾವಣೆ 3, ಬೆಟಗೇರಿ 6, ಮುಳಗುಂದ 4, ನರೇಗಲ್ 3, ಮುಂಡರಗಿ 2 ಹಾಗೂ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣ ದಾಖಲಿಸಿ, ಹಣ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದ್ದಾರೆ.





