ಗದಗ | ದೇಶದ ಶೇ.75ರಷ್ಟು ಜನರು ಮೋದಿ ಬೆಂಬಲಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ವಿಶ್ವಾಸ

Date:

ಹತ್ತು ವರ್ಷ ಅಧಿಕಾರ ನಡೆಸಿದರೂ ದೇಶದಲ್ಲಿ ಪ್ರಧಾನಿ ಮೋದಿ ಪರ ಅಲೆ ಇದ್ದು, ದೇಶದ ಶೇ.75ರಷ್ಟು ಜನರು ಮೋದಿಯವರನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಸವಡಿ, ಚಿಕ್ಕಮಣ್ಣೂರು, ಕುರಹಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.

“ಈ ಚುನಾವಣೆ ರಾಜ್ಯಕ್ಕೆ ಸಂಬಂಧಿಸಿದ್ದಲ್ಲ. ಇಡೀ ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಬಗ್ಗೆ ಚಿಂತಿಸುವ ಚುನಾವಣೆ. ಮೋದಿಯವರು ಪ್ರಧಾನಿಯಾಗಿ ಹತ್ತು ವರ್ಷ ಅಧಿಕಾರ ನಡೆಸಿದ್ದಾರೆ. ಆದರೂ, ಅವರ ಪರ ಅಲೆ ಇದೆ. ಈ ದೇಶದ ಶೇ.75ರಷ್ಟು ಜನರು ನರೇಂದ್ರ ಮೋದಿಯವರ ಪರವಾಗಿದ್ದಾರೆ. ಶೇ.25ರಷ್ಟು ಜನರು ಅವರನ್ನು ವಿರೋಧಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿಯವರು ತಮ್ಮ ತಾಯಿ ತೀರಿ ಹೋದಾಗ ಕೇವಲ ಎರಡು ತಾಸಿನಲ್ಲಿ ಅವರ ಅಂತ್ಯಸಂಸ್ಕಾರ ಮುಗಿಸಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದರು. ದೇಶದ ಸಫಾಯಿ ಕರ್ಮಚಾರಿಗಳ ಪಾದಪೂಜೆ ಮಾಡಿದರು. ಇಡೀ ದೇಶದ ಜನಸಂಖ್ಯೆಯನ್ನು ಆಸ್ತಿಯನ್ನಾಗಿ ಪರಿಗಣಿಸಿ ದೇಶದ ಅಭಿವೃದ್ಧಿಗೆ ಜನಸಂಖ್ಯೆ ಕಾರಣವೆಂದು ಜಗತ್ತಿಗೆ ತೊರಿಸಿಕೊಟ್ಟರು. ಬಡತನ ದೊಡ್ಡ ಸಮಸ್ಯೆ ಎಂದು ಎಲ್ಲರೂ ಹೇಳುತ್ತಿದ್ದರು. ಮೋದಿಯವರು 15 ಕೋಟಿ ಮಂದಿಯನ್ನು ಬಡತನ ರೇಖೆಗಿಂತ ಮೇಲೆ ತಂದರು” ಎಂದರು.

“ಜನರು ಕಷ್ಟದಲ್ಲಿದ್ದಾಗ ಸರ್ಕಾರ ಹೇಗೆ ಸ್ಪಂದಿಸುತ್ತದೆ ಎನ್ನುವುದರ ಮೇಲೆ ಸರ್ಕಾರ ಜೀವಂತ ಇದಿಯೊ ಇಲ್ಲವೋ ಎನ್ನುವುದು ತಿಳಿಯುತ್ತದೆ. ‌ಮೋದಿಯವರು ಹತ್ತು ವರ್ಷ ಅಧಿಕಾರ ಮಾಡಿದರೂ ಕೂಡಾ ಅವರ ಜನಪ್ರಿಯತೆ ಕಡಿಮೆಯಾಗಿಲ್ಲ. ಅದರೆ, ಕಾಂಗ್ರೆಸ್‌ನವರಿಗೆ ಜನಪ್ರಿಯತೆ ಮುಖ್ಯವಲ್ಲ. ಗಾಂಧಿ ಕುಟುಂಬದ ಕೃಪೆ ಇದ್ದರೆ ಮಾತ್ರ ಪ್ರಧಾನಿಯಾಗಲು ಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಂಭ್ರಮದ ರಂಜಾನ್ ಆಚರಣೆ; ಸಾಮೂಹಿಕ ಪ್ರಾರ್ಥನೆ

“ಈ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಯೋಜ‌ನೆಗಳನ್ನು ತರಲು ಎಲ್ಲ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಳಕಪ್ಪ ಬಂಡಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...