ಶಾಸಕ ಜಿ.ಎಸ್.ಪಾಟೀಲ್ ಅವರು ಐವತ್ತು ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ನಾಲ್ಕು ಭಾರಿ ಶಾಸಕರಾಗಿದ್ದಾರೆ. ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಸಲವಾದರೂ ಶಾಸಕ ಜಿ. ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
“ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೀಗಾಗಿ ರೋಣ ಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕಾಲಕಾಳೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
“ಶಾಸಕ ಜಿ ಎಸ್ ಪಾಟೀಲ್ ಗೆ ಪ್ರತೀ ಬಾರಿ ಅನ್ಯಾಯವಾಗಿದೆ. ಹೀಗಾಗಿ ಹೈಕಮಾಂಡ್ ಈ ಭಾರಿ ಜಿ. ಎಸ್. ಪಾಟೀಲ್ ಹಾಗೂ ರೋಣ ಕ್ಷೇತ್ರಕ್ಕೆ ನ್ಯಾಯ ಒದಗಿಸಬೇಕು” ಎಂದು ಕಾರ್ಯಕರ್ತರು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಮನ-ಮನೆಗೂ ಸಂವಿಧಾನ ಕಾರ್ಯಕ್ರಮಕ್ಕೆ ಚಾಲನೆ
ಸಚಿವ ಸ್ಥಾನ ಕೊಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಪ್ರತಿಭಟನಾಕಾರರು, ಜಿಲ್ಲೆಯ ಕಾಂಗ್ರೆಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.





