ಗದಗ | ಲಕ್ಕುಂಡಿ ಚಿನ್ನದ ನಿಧಿ ಪ್ರಕರಣ ಬಳಿಕ, ಉತ್ಖನನ ಆರಂಭ

Date:

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪ್ರಕರಣ ಬಳಿಕ, ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರು ಇಂದು ಶುಕ್ರವಾರ  ಚಾಲನೆ ನೀಡಿದರು.

ಪುರಾತತ್ವ ಇಲಾಖೆಯ ನಿವೃತ್ತ ಅಧೀಕ್ಷಕ ಹಾಗೂ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ ಅವರ ನೇತೃತ್ವದಲ್ಲಿ ಉತ್ಖನನ ಆರಂಭವಾಗಿದ್ದು, ಉತ್ಖನನ ಕುರಿತು ಪುರಾತತ್ವ ಅಧಿಕಾರಿಗಳು ಕಾರ್ಮಿಕರಿಗೆ ಮಾಹಿತಿ ನೀಡಿ ಮಾತನಾಡಿದರು.

“20 ಜನ ಮಹಿಳೆಯರು, 10 ಜನ ಪುರುಷರು ಸೇರಿ ಒಟ್ಟು 30 ಕಾರ್ಮಿಕರಿಂದ ಉತ್ಖನನ ಕಾರ್ಯ ಮುಂದುವರಿದಿದ್ದು, ಪುರಾತತ್ವ ಇಲಾಖೆ ಅಧಿಕಾರಿಗಳು ಪ್ರಾಚೀನ ವಸ್ತುಗಳ ಬಗೆಗೆ ಉತ್ಖನನ ಮಾಡುವ ಬಗ್ಗೆ ಕಾರ್ಮಿಕರಿಗೆ ಮಾಹಿತಿ ನೀಡಿ, ನಾಜೂಕಿನಿಂದ ಉತ್ಖನನ ಪ್ರಕ್ರಿಯೆ ನಡೆಸಬೇಕು. ಅಲ್ಲದೇ, ಯಾವುದೇ ವಸ್ತು ಸಿಕ್ಕರೂ ಅದನ್ನು ಅಧಿಕಾರಿಗಳಿಗೆ ತಿಳಿಸಬೇಕು. ಭೂಮಿ ಅಗೆಯುವಾಗ ಸೂಕ್ಷ್ಮತೆ ಇರಲಿ” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಬೆಳಿಗ್ಗೆ 11ರಿಂದ ಆರಂಭವಾದ ಉತ್ಖನನವು ಸಂಜೆ 5.30ರ ವರೆಗೆ ನಡೆದಿದ್ದು, ದಿನದ ಅಂತ್ಯಕ್ಕೆ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ 10/10 ಅಡಿಯ ಸುತ್ತಳತೆಯಲ್ಲಿ ನಡೆದ ಉತ್ಖನನದಲ್ಲಿ ಶುಕ್ರವಾರ ಕೇವಲ 1 ಅಡಿ ಆಳದಷ್ಟು ಮಾತ್ರ ಮಣ್ಣು ಅಗೆಯಲಾಗಿದ್ದು, ಇನ್ನೂ ಸುಮಾರು 7 ರಿಂದ 8 ಅಡಿ ಆಳ ಅಗೆದರೆ ಏನಾದರೂ ಅವಶೇಷಗಳು, ಆಭರಣ, ವಸ್ತುಗಳು ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ

ಪುರಾತತ್ವ ಇಲಾಖೆ, ಜಿಲ್ಲಾಡಳಿತ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೇತೃತ್ವದಲ್ಲಿ ನಡೆಯುತ್ತಿರುವ ಉತ್ಖನನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಪುರಾತತ್ವ ಇಲಾಖೆಯ ನಿವೃತ್ತ ಅಧೀಕ್ಷಕ ಹಾಗೂ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ ಅವರ ನೇತೃತ್ವದಲ್ಲಿ ಉತ್ಖನನ ಆರಂಭವಾಗಿದೆ. ನಿಧಿ ಸಿಕ್ಕಿರುವ ಬೆನ್ನಲ್ಲೆ ಉತ್ಖನನ ನಡೆಯುತ್ತಿರುವುದು ಕಾಕತಾಳೀಯ. ಸರ್ಕಾರ ಪೂರ್ವ ನಿಗದಿಯಂತೆ ಉತ್ಖನನ ಕಾರ್ಯ ಮಾಡುತ್ತಿದ್ದು, ಭೂಮಿಯ ಒಡಲಿನಲ್ಲಿ ಏನಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ದೇವಸ್ಥಾನದ ಕುರುಹು ಇರುವ ಬಗ್ಗೆ ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ಉತ್ಖನನಕ್ಕೆ ಚಾಲನೆ ಸಿಕ್ಕಿದೆ. ಉತ್ಖನನ ಏನು ಸಿಗುತ್ತದೆ ಎಂದು ಕಾಯ್ದು ನೋಡಬೇಕು” ಎಂದರು.

“ಪುರಾತತ್ವ ಇಲಾಖೆಯ ನಿವೃತ್ತ ಅಧೀಕ್ಷಕ ಹಾಗೂ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ ಅವರ ನೇತೃತ್ವದಲ್ಲಿ ಉತ್ಖನನ ಆರಂಭವಾಗಿದೆ. ನಿಧಿ ಸಿಕ್ಕಿರುವ ಬೆನ್ನಲ್ಲೆ ಉತ್ಖನನ ನಡೆಯುತ್ತಿರುವುದು ಕಾಕತಾಳೀಯ. ಸರ್ಕಾರ ಪೂರ್ವ ನಿಗದಿಯಂತೆ ಉತ್ಖನನ ಕಾರ್ಯ ಮಾಡುತ್ತಿದ್ದು, ಭೂಮಿಯ ಒಡಲಿನಲ್ಲಿ ಏನಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ದೇವಸ್ಥಾನದ ಕುರುಹು ಇರುವ ಬಗ್ಗೆ ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ಉತ್ಖನನಕ್ಕೆ ಚಾಲನೆ ಸಿಕ್ಕಿದೆ. ಉತ್ಖನನ ಏನು ಸಿಗುತ್ತದೆ ಎಂದು ಕಾಯ್ದು ನೋಡಬೇಕು” ಎಂದರು.

ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನಕ್ಕೂ ಮುನ್ನ ಉತ್ಖನನದ ಜಾಗೆ ಹಾಗೂ ಉತ್ಖನನಕ್ಕೆ ಬೇಕಾಗುವ ಸಲಕರಣಗೆಳಿಗೆ ಪೂಜೆ ಸಲ್ಲಿಸಲಾಯಿತು. ನಂತರ 20 ಜನ ಮಹಿಳೆಯರು, 10 ಜನ ಪುರುಷರು ಸೇರಿ ಒಟ್ಟು 30 ಕಾರ್ಮಿಕರಿಂದ ಉತ್ಖನನ ಪ್ರಕ್ರಿಯೆ ಆರಂಭವಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ, ಪ್ರಾಧಿಕಾರದ ರಾಜ್ಯ ಸಮಿತಿ ಸದಸ್ಯ ಸಿದ್ದು ಪಾಟೀಲ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಗ್ರಾಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಪಿಡಿಒ ಅಮೀರ ನಾಯ್ಕ ಸೇರಿ ಹಲವರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...