ಗದಗ | ರಾಜ್ಯ ಸರಕಾರ ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ: ಜೆಡಿಎಸ್ ಆರೋಪ

Date:

“ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರದ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಜೆಡಿಎಸ್ ಪಕ್ಷದ ಮುಖಂಡರು ಆರೋಪಿಸಿದರು.

ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ರಾಜ್ಯ ಸರಕಾರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಸರಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ, ತಹಶಿಲ್ದಾರ್ ಕಛೇರಿವರೆಗೆ ಮೆರವಣಿಗೆ ಹಮ್ಮಿಕೊಂಡು ತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

“ಕಾಂಗ್ರೆಸ್‌ನ ಹಿರಿಯ ನಾಯಕರೇ ದಾಖಲೆಗಳ ಸಮೇತ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ. ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳು ಕೊಟ್ಟು, ಸದ್ಯ ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಲು ಆಗುತ್ತಿಲ್ಲ. ಇನ್ನು ವಸತಿ ಇಲಾಖೆಯಲ್ಲಂತೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರಿ ಆಸ್ಪತ್ರೆ ವೈದ್ಯರ ವರ್ಗಾವಣೆ: ಕರವೇ ಗಜಸೇನೆ ಖಂಡನಿಯ

“ವಸತಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಹಾಗೂ ಸಚಿವ ಝಮೀರ್ ಅಹ್ಮದ್ ವಿರುದ್ಧ ಅವರ ಪಕ್ಷದ ಶಾಸಕರೇ ಆಪಾದನೆ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಝಮೀರ್ ಅಹ್ಮದ್‌ ಅವರನ್ನು ಸಂಪುಟದಿಂದ ಕೈ ಬಿಡಬೇಕು” ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...