ಗದಗ | ಮನರೇಗಾ ಯೋಜನೆಯಡಿ ಸ್ವಾವಲಂಬಿ ಬದುಕು; ಮುಂಡವಾಡದ ವೃದ್ಧ ದಂಪತಿಯ ಶ್ರಮಗಾಥೆ

Date:

ಇಳಿ ವಯಸ್ಸಿನ ವೃದ್ಧ ದಂಪತಿಗೆ ಮನರೇಗಾ ಯೋಜನೆಯು ಬದುಕಲು ಆಧಾರವಾಗಿದೆ. ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರಾಗಿ ಭಾಗವಹಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸಿ ಈ ದಂಪತಿ ಯುವಕರನ್ನೂ ನಾಚಿಸುವಂತೆ ದುಡಿಮೆ ಮಾಡಿ ಗಟ್ಟಿ ನೆಲೆ ಕಂಡುಕೊಂಡಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಪಂಚಾಯತಿಯ ಮುಂಡವಾಡ ಗ್ರಾಮದಲ್ಲಿ ವಾಸವಾಗಿರುವ 82 ವರ್ಷದ ಶಂಕರಪ್ಪ ಕೂಬಿಹಾಳ ಮತ್ತು 74 ವರ್ಷದ ಶಂಕರಮ್ಮ ಕೂಬಿಹಾಳ ದಂಪತಿ, ತಮ್ಮ ಇಳಿವಯಸ್ಸಿನಲ್ಲೂ ಶ್ರಮಜೀವಿಗಳಾಗಿ ಬದುಕು ಕಟ್ಟಿಕೊಂಡಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಈ ದಂಪತಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ವಿವಿಧ ಕಾಮಗಾರಿಗಳಲ್ಲಿ ಕೈಜೋಡಿಸಿ ದುಡಿಯುವುದರೊಂದಿಗೆ ಸಹಜೀವನ ನಿರ್ವಹಿಸುತ್ತಿದ್ದಾರೆ.

ಸಮುದಾಯ ಬದು ನಿರ್ಮಾಣ, ನಾಲಾ ಮತ್ತು ಕೆರೆ ಹೂಳೆತ್ತುವಂತಹ ಶ್ರಮಪೂರ್ಣ ಕಾರ್ಯಗಳಲ್ಲೂ ಯುವಕರ ಸಮಾನಾಗಿ ಕೆಲಸ ಮಾಡುತ್ತಾರೆ. ಯಾರ ಸಹಾಯವೂ ಇಲ್ಲದೇ ಶ್ರಮವನ್ನಷ್ಟೇ ನಂಬಿ ಬದುಕುತ್ತಿರುವ ಇವರ ಹಠ ಇಂದಿನ ಪೀಳಿಗೆಗೆ ಒಂದು ಜೀವನ ಪಾಠವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಜ್ಜ ಅಜ್ಜಿ ಯುವಜನತೆ ನಾಚುವಂತೆ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿಯಲ್ಲಿ ಉದ್ಯೋಗ ಪಡೆದು ಕೆಲಸ ಮಾಡುತ್ತಿದ್ದಾರೆ. ಬಂದ ಕೂಲಿ ಮೊತ್ತದಿಂದ ಸ್ವಾವಲಂಬಿ ಜೀವನವನ್ನು ನಡೆಸುತ್ತಿದ್ದಾರೆ. ತಮ್ಮ ಎರಡು ಎಕರೆ ಕುಷ್ಕಿ ಕೃಷಿಭೂಮಿಯಲ್ಲಿ ಮತ್ತು ಬೇರೆ ರೈತರ ಜಮೀನುಗಳಲ್ಲಿ ದುಡಿಯುವ ಈ ದಂಪತಿ, ಬೇಸಿಗೆ ಕಾಲದಲ್ಲಿ ಮನರೇಗಾ ಕಾಮಗಾರಿಗಳಲ್ಲಿ ಭಾಗವಹಿಸಿ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ‌.

ಇಳಿವಯಸ್ಸಿನಲ್ಲೂ ಕುಗ್ಗದ ಜೀವನೋತ್ಸಾಹದೊಂದಿಗೆ ಈ ಜೋಡಿ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರನ್ನೂ ಮದುವೆ ಮಾಡಿ ಕೊಟ್ಟಿದ್ದಾರೆ. ದಂಪತಿಗಳ ಉತ್ಸಾಹದ ಗುಟ್ಟೇನು ಅಂದರೆ.. ದಿನಂಪ್ರತಿ ಜೋಳದ ರೊಟ್ಟಿ ಊಟ, ನಿತ್ಯವು ಮೈ ಬಗ್ಗಿಸಿ ದುಡಿಯುವುದು ಕಾರಣ ಎಂದು ನಗುತ್ತಾರೆ.

WhatsApp Image 2025 04 26 at 11.29.43 AM

ಐವತ್ತು ಅರವತ್ತು ವಯಸ್ಸಿಗೆ ಜನರು ಆರೋಗ್ಯದ ವಿಚಾರದಲ್ಲಿ ಹೆಚ್ಚು ಹೈರಾಣಾಗುವ ಇಂದಿನ ದಿನಮಾನಗಳಲ್ಲಿ ಈ ದಂಪತಿಗಳ ಬಳಿ ಯಾವುದೇ ಕಾಯಿಲೆ ಹತ್ತಿರ ಸುಳಿದಿಲ್ಲ. ಕಿವಿಗಳು ಸ್ಪಷ್ಟವಾಗಿ ಕೇಳುತ್ತವೆ. ಕಣ್ಣುಗಳು ನಿಚ್ಚಳವಾಗಿ ಕಾಣಿಸುತ್ತವೆ. ಕೂಲಿ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾರೆ. ಆ ಮೂಲಕ ನರೇಗಾ ಯೋಜನೆಯಲ್ಲಿ ಹಿರಿಯ ನಾಗರಿಕರಿಗೆ ಇರುವ ಅರ್ಧ ಕೆಲಸ ಪೂರ್ಣ ಕೂಲಿ ಎಂಬ ನಿಯಮವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಯುವಕರು ನಾಚುವಂತೆ ಕಷ್ಟಪಟ್ಟು ಕೆಲಸ ನಿರ್ವಹಿಸಿ ಕೂಲಿಮೊತ್ತದಿಂದ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

ಹಿರಿಯ ನರೇಗಾ ಕೂಲಿಕಾರ್ಮಿಕ ದಂಪತಿ ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಬ್ಯಾಸಗಿಯೊಳಗ ನಾವು ತಪ್ಪದ ಮನರೇಗಾ ಕಾಮಗಾರಿಯೊಳಗ ಭಾಗವಹಿಸ್ತೀವಿ. ಇದು ನಮ್ಮ ದುಡಿತಕ್ಕ ಭಾಳ ಅನುಕೂಲ ಆಗ್ಯೇದ. ಸುಮಾರು ಹತ್ತ ವರ್ಷ ಆಗಿರಬೇಕ್‌ರಿ ನಾವು ಹಿಂಗ ದುಡಕೋತ ಬಂದು. ನರೇಗಾ ಕೆಲಸ ಇಲ್ದಾಗ ನಮ್ಮ ಹಾಗೂ ಮಂದಿ ಹೊಲ್ದಾಗ ಜೊತಿಯಾಗಿ ದುಡಿತಿವ್ರಿ” ಎಂದು ಪ್ರತಿಕ್ರಿಯೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರೋಣ | ಉದ್ಘಾಟನೆಯಾದರೂ ಬಾಗಿಲು ತೆರೆಯದ ಇಂದಿರಾ ಕ್ಯಾಂಟೀನ್;‌ ಸ್ಥಳೀಯರ ಆಕ್ರೋಶ

ಈ ಕುರಿತು ಮುಂಡರಗಿ ತಾಪಂ ಇಒ ವಿಶ್ವನಾಥ ಹೊಸಮನಿ ಮಾತನಾಡಿ “ಮುಂಡರಗಿ ತಾಲೂಕಿನಲ್ಲಿ ಮನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಾ ಅನೇಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಗುಳೆ ಹೋಗುವುದನ್ನು ತಪ್ಪಿಸುವುದರ ಜೊತೆಗೆ ಇಂತಹ ಹಿರಿಯ ನಾಗರಿಕರು ಯೋಜನೆಯ ಕಾಮಗಾರಿ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿರುವುದು ದುಡಿಯುವ ವರ್ಗದ ಪ್ರತಿಯೊಬ್ಬರಿಗೂ ಮಾದರಿ” ಎಂದು ಹೇಳಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...