ಗದಗ | ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟ ಬಂಧಿಸಿ; ಅಂಜುಮಾನ್ ಇಸ್ಲಾಂ ಕಮೀಟಿ ಒತ್ತಾಯ

Date:

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಗ್ರಹಿಸಿದರು.

ಕಲ್ಲಡ್ಕ ಪ್ರಭಾಕರ ಭಟ್ಟನನ್ನ ಬಂಧಿಸಲು ಒತ್ತಾಯಿಸಿ ಅಂಜುಮಾನ್ ಇಸ್ಲಾಂ ಕಮೀಟಿಯಿಂದ ಗಜೇಂದ್ರಗಡ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ʼಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೆ ದೇವತಾಃʼ ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು ನಮ್ಮ ಪರಂಪರೆ ಹೇಳುತ್ತದೆ. ಆದರೆ, ಇಂತಹ ಪರಂಪರೆಗೆ ದಕ್ಕೆ ಉಂಟು ಮಾಡಿದ, ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಅವಮಾನ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರ ಕುರಿತು ಅವಮಾನಕರ ಹೇಳಿಕೆ ನೀಡಿದ ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಮಾನಕರ ಹೇಳಿಕೆಯನ್ನು ನೀಡಿದ ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನ ತಕ್ಷಣವೇ ಸರ್ಕಾರ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕಿತ್ತು ಆದರೆ ಸರ್ಕಾರ ಕಣ್ಮುಚ್ಚಿ ಕುಳಿತುಕೊಂಡಿದೆ.

ಸಿದ್ದರಾಮಯ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಅಲ್ಪಸಂಖ್ಯಾತರ ಹಿತ ಕಾಯವುದಾಗಿ ವಚನ ನೀಡಿದ್ದು ಇದೀಗ ಅಲ್ಪಸಂಖ್ಯಾತರ ಮಹಿಳಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆಯ ವಿರುದ್ಧವಾಗಿ ತುಟಿಪಿಟಕ್ಕ ಎನ್ನುತ್ತಿಲ್ಲ. ಇದು ಅತ್ಯಂತ ಖಂಡನೀಯ. ಕೂಡಲೇ ಸರ್ಕಾರ ಈ ವ್ಯಕ್ತಿಯ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಒದ್ದು ಒಳಗಡೆ ಹಾಕಬೇಕಿತ್ತು. ಆದರೆ, ಇದನ್ನು ಮಾಡದೇ ಆರೋಪಿಯನ್ನು ಬಂಧಿಸುವುದಿಲ್ಲ ಎಂದು  ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ ರೀತಿಯನ್ನು ಬಲವಾಗಿ ಖಂಡಿಸುವೆ ಎಂದರು.

ಪುರಸಭಾ ಸದಸ್ಯ ರಾಜು ಸಾಂಗ್ಲೀಕಾರ ಮಾತನಾಡಿ ಮಹಿಳೆಯರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡುವ ಇಂತಹ ವ್ಯಕ್ತಿಗಳಿಗೆ ಸರ್ಕಾರ ತಕ್ಕಪಾಠ ಕಲಿಸಬೇಕು. ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಲು ಮುಂದಾಗಬೇಕಿದೆ ಎಂದರು.

ಈ ವೇಳೆ ಅಂಜುಮಾನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ, ನಾಸೀರ್ ಸುರಪುರ, ಶಾಮೀದಸಾಬ ದಿಂಡವಾಡ, ದಾದು ಹಣಗಿ, ಮುರ್ತುಜಾ ಡಾಲಾಯತ, ಭಾಷೇಸಾಬ ಮುದಗಲ್ಲ, ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...