2025-26ನೇ ಸಾಲಿಗೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ನವೇಭಾವನೂರತಾ ಶಿರಹಟ್ಟಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
1 ರಿಂದ 6ನೇ ತರಗತಿಗೆ ಸಂಖ್ಯಾ ಬಲಕ್ಕನುಗುಣವಾಗಿ ವಿಷಯವಾರು ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಮಾನ್ಯ ನಿರ್ದೇಶಕರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಇವರ ಸುತ್ತೋಲೆಯನ್ವಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ: PUC, D.Ed ಅಭ್ಯರ್ಥಿಗಳು ನಿಗಧಿತ ನಮೂನೆಯ ಅರ್ಜಿಗಳನ್ನು ಸಹಾಯಕ ನಿರ್ದೇಶಕರು ಸಮಾಜಕಲ್ಯಾಣ ಇಲಾಖೆ, ಶಿರಹಟ್ಟಿ ಹಾಗೂ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ನವೇಭಾವನೂರ ಇವರಿಂದ 8/9/2025 ರಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ದಿನಾಂಕ: 17/09/2025 ಸಾಯಂಕಾಲ 5:30 ಗಂಟೆ ಒಳಗಾಗಿ ಸಲ್ಲಿಸಬಹುದಾಗಿದೆ.
ಮೊದಲು ಗ್ರಾಮ ಮಟ್ಟ, ಗ್ರಾಮ ಪಂಚಾಯತಿ ಮಟ್ಟ, ಹೋಬಳಿ ಮಟ್ಟ ಮತ್ತು ತಾಲ್ಲೂಕು ಮಟ್ಟದಂತೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು.ಒಂದು ಗ್ರಾಮದಲ್ಲಿ ಇಬ್ಬರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಪಕ್ಷದಲ್ಲಿ ಆ ಇಬ್ಬರು ಅಭ್ಯರ್ಥಿಗಳಲ್ಲಿ ಯಾರಾದರೂ ಹಿಂದಿನ ವರ್ಷದಲ್ಲಿಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಸದರಿಯವರನ್ನು ಆದ್ಯತೆ ಮೇಲೆ ಆಯ್ಕೆ ಮಾಡಲಾಗುವುದು. ಒಂದಕ್ಕಿAತ ಹೆಚ್ಚಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಹಿಂದಿನ ವರ್ಷ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಶಿರಹಟ್ಟಿ ರವರ ಕಛೇರಿ ದೂರವಾಣಿ ಸಂಖ್ಯೆ 08487-295097 ಗೆ ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ.





