ಗದಗ | ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

Date:

ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿಗೆ ಆಯ್ಕೆ ಮಾಡಬೇಕಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್) ಕಾನೂನು ಪದವೀಧರರು ಭರ್ತಿ ಮಾಡಿದ ಅರ್ಜಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗದಗ ಜಿಲ್ಲಾ ಕಚೇರಿಗೆ ನವೆಂಬರ್ 16ರ ಸಾಯಂಕಾಲ 5.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆ ತಿಳಿಸಿದೆ.

ಗದಗ ಜಿಲ್ಲೆಯಲ್ಲಿಯೇ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಗದಗ ಜಿಲ್ಲೆಯವರಾಗಿರಬೇಕು. ಕಾನೂನು ತರಬೇತಿ ಪಡೆಯುವ ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂಪಾಯಿ ಒಳಗಿರಬೇಕು. ತರಬೇತಿ ಅವಧಿ 4 ವರ್ಷಗಳಾಗಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮಾಹೆಗೆ 5,000 ರೂ. ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ವಸತಿ ಸಮುಚ್ಛಯದಲ್ಲಿ ಅಮಾನಿಕೆರೆ ಕೋಡಿಹಳ್ಳ ನಿವಾಸಿಗಳಿಗೆ ಆದ್ಯತೆ ನೀಡಿ: ನರಸಿಂಹಮೂರ್ತಿ

ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅವರ ವಯಸ್ಸನ್ನು ದೃಢೀಕರಿಸುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ಪ್ರಮಾಣ ಪತ್ರ, ಪದವಿ ಹಾಗೂ ಕಾನೂನು ಪದವಿಯಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸಬೇಕು. ಅಭ್ಯರ್ಥಿಯ ವಯಸ್ಸು ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ 30 ವರ್ಷಗಳಿಗೆ ಮೀರಿರಬಾರದು. ಅಭ್ಯರ್ಥಿಯು ಬಾರ್‌ ಕೌನ್ಸಿಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸರಬೇಕು ಹಾಗೂ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ, ಜಿಲ್ಲಾ ನ್ಯಾಯಾಲಯದ ಎದುರು, ಹುಬ್ಬಳ್ಳಿ ರಸ್ತೆ, ಗದಗ ಇಲ್ಲಿ ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...