ಗದಗ  | ಚಾಲಕರ ಹುದ್ದೆಗೆ ಖಾಸಗಿ ಜಾಹೀರಾತಿನಲ್ಲಿ ಅರ್ಜಿ ಅಹ್ವಾನ; ಖಾಸಗೀಕರಣವಾಗಲಿದೆಯೇ ವಾಯವ್ಯ ಕರ್ನಾಟಕ ಸಾರಿಗೆ?

Date:

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಏಜೆನ್ಸಿ ಜಾಹೀರಾತಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆ ಕರ್ನಾಟಕ ಸರ್ಕಾರಕ್ಕೆ ಗೊತ್ತಿದೆಯೋ ಅಥವಾ ಗೊತ್ತಿದ್ದೂ ಸರ್ಕಾರವೇ ಖಾಸಗಿಯವರಿಗೆ ಕೊಟ್ಟಿದೆಯೇ ಎಂದು ಸಾಮಾಜಿಕ ಹೋರಾಟಗಾರ ಮುತ್ತು ಬಿಳಿಯಲಿ ಪ್ರಶ್ನಿಸಿದ್ದಾರೆ.

“ಇಷ್ಟು ದಿನ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ನಿಯಮಗಳ ಪ್ರಕಾರ ಚಾಲಕರ ಖಾಲಿ ಹುದ್ದೆಗಳಿಗೆ ಸರ್ಕಾರವೇ ಅರ್ಜಿ ಕರೆದು ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ನಮಗೆಲ್ಲರಿಗೂ ಗೊತ್ತಿರುವ ವಿಷಯ. ಆದರೆ ಸಂಸ್ಥೆಯ ಹೆಸರು ಹಾಳು ಮಾಡುವುದಕ್ಕೆ ಯಾರೋ ಈ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬುದನ್ನು ಸರ್ಕಾರ ಖಚಿತ ಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಹೋರಾಟಗಾರ ಮುತ್ತು ಬಿಳಿಯಲಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಖಾಲಿ ಹುದ್ದೆಗೆ ಅರ್ಜಿ ಕರೆದಿರುವ ಜಾಹೀರಾತಿನಲ್ಲಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ, ʼಇದು ನಿಜವಾದ ಜಾಹೀರಾತು, ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿಯಿದೆ. ಈಗಾಗಲೇ ಸಾಕಷ್ಟು ಅರ್ಜಿಗಳು ಬರುತ್ತಿವೆ. ಸಮಯ ಮೀರುವ ಮುನ್ನ ಬೇಗ ಬಂದು ಅರ್ಜಿ ಸಲ್ಲಿಸಿರೆಂದು ತಿಳಿಸಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಅನೇಕ ವಿದ್ಯಾವಂತ ಯುವಕ, ಯುವತಿಯರು ಸರ್ಕಾರಿ ನೌಕರಿಯ ಕನಸನ್ನು ಕಟ್ಟಿಕೊಂಡು ಹಗಲು ರಾತ್ರಿ ಓದಿ ನೌಕರಿ ಪಡೆದುಕೊಳ್ಳುವ ಹಂಬಲದಲ್ಲಿದ್ದಾರೆ. ಈ ರೀತಿ ಸರ್ಕಾರಿ ಉದ್ಯೋಗಗಳನ್ನು ಖಾಸಗಿಯವರಿಗೆ ಕೊಟ್ಟು ಸರ್ಕಾರ ರಾಜ್ಯದ ನಿರುದ್ಯೋಗಿ ಯುವಜನರಿಗೆ ದ್ರೋಹ ಮಾಡುತ್ತಿದೆ. ಈಗ ಕೇವಲ ಚಾಲಕರ ಹುದ್ದೆಗೆ ಮಾತ್ರ ಸೀಮಿತವಾಗಿದೆ. ಮುಂದೊಂದು ದಿನ ಇಡೀ ಸಂಸ್ಥೆಯನ್ನು ಖಾಸಗೀಕರಣ ಮಾಡಿದರೆ ಆಶ್ಚರ್ಯಪಡಬೇಕಾಗಿಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ದಸರಾ ಉತ್ತಮ ವೇದಿಕೆ: ಸಚಿವ ಹೆಚ್ ಸಿ ಮಹದೇವಪ್ಪ

“ಕರ್ನಾಟಕ ಸರ್ಕಾರ ಕೂಡಲೇ ಈ ಪ್ರಕ್ರಿಯೆಯನ್ನು ರದ್ದುಗೊಳಿಸಿ ಸರ್ಕಾರದ ವತಿಯಿಂದ ನೇಮಕಾತಿ ಪ್ರಕ್ರಿಯೆ ಮಾಡಬೇಕು” ಎಂದು ದಲಿತ ಸಂಘಟನೆಗಳ ಒಕ್ಕೂಟದ ಪರವಾಗಿ ಮುತ್ತು ಬಿಳಿಯಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...