ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

Date:

“ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ ಸರ್ಕಾರ ವಿಶೇಷ ಸಚಿವ ಸಂಪುಟದಲ್ಲಿ ಜಸ್ಟಿಸ್ ನಾಗಮೋಹನ ದಾಸ್ ಅವರ ವರದಿಯನ್ನು ಪರಿಷ್ಕರಿಸಿ ಮೂರು ಗುಂಪುಗಳಾಗಿ ವಿಂಗಡಿಸಿ ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ” ದಲಿತ ಮುಖಂಡ ಬಸವರಾಜ ಕಡೆಮನಿ ಹೇಳಿದರು.

ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಒಳಮೀಸಲಾತಿ ಅಂಗೀಕಾರ ಸ್ವಾಗತಿಸಿ ದಲಿತ ಮುಖಂಡರೆಲ್ಲರೂ ಸೇರಿ ಪರಸ್ಪರ ಸಿಹಿ ಹಂಚಿ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿ ಮಾತನಾಡಿದರು.

“ಒಳಮೀಸಲಾತಿ ಜಾರಿಗಾಗಿ ಮೂರುವರೇ ದಶಕಗಳಿಂದ ರಾಜ್ಯದಲ್ಲಿ ನಿರಂತರ ಹೋರಾಟ ನಡೆದಿತ್ತು. ಇವತ್ತು ಆ ಹೋರಾಟಕ್ಕೆ ಜಯ ಸಿಕ್ಕಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜಿಲ್ಲೆಯ ಎಲ್ಲ ದಲಿತರ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 “ಕಾಂಗ್ರೆಸ್ ನೇತೃತ್ವದ ಸರ್ಕಾರ ಸಹಕಾರಿ ಕ್ಷೇತ್ರದಲ್ಲಿ ದಲಿತರಿಗೂ ಮೀಸಲಾತಿಯನ್ನು ಕಲ್ಪಿಸಿ ಕಾಯ್ದೆಯನ್ನು ಜಾರಿಗೆ ತಂದಿದೆ ಇನ್ನು ಮುಂದೆ ದಲಿತರು ಸಹಕಾರಿ ಕ್ಷೇತ್ರದಲ್ಲಿ ಗುರಿತಿಸಿಕೊಳ್ಳಲು ಸಮಾಜಮುಖಿಯಾಗಿ ಕೆಲಸ ಮಾಡಲು ತುಂಬಾ ಸಹಕಾರಿಯಾಗಿದೆ” ಎಂದು ತಿಳಿಸಿದರು.

ದಲಿತ ಮುಖಂಡ ಶರೀಫ್ ಬಿಳೆಯಲಿ ಮಾತನಾಡಿ, “ಸರ್ಕಾರ ಮೂರು ಗುಂಪುಗಳಾಗಿ ವಿಂಗಡಿಸಿ ಒಳಮೀಸಲಾತಿಯನ್ನು ಅಂಗೀಕರಿಸಿದೆ. ಆದರೆ ಮೂರನೇ ಗುಂಪಿನಲ್ಲಿ ಅಲೆಮಾರಿಗಳನ್ನ ಸೇರಿಸಿ ಅವರನ್ನು ಅವಕಾಶ ವಂಚಿತರನ್ನಾಗಿ ಮಾಡಿದೆ. ಅಲೆಮಾರಿಗಳನ್ನು ಬೇರ್ಪಡಿಸಿ ಮೀಸಲಾತಿಯನ್ನು ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

“ಒಳಮೀಸಲಾತಿ ವರದಿಯನ್ನು ಜಾರಿಗೆ ತಂದು ಬ್ಯಾಕಲಾಗ್ ಹಾಗೂ ಇನ್ನಿತರ ಉದ್ಯೋಗಗಳನ್ನು ಆದಷ್ಟು ಬೇಗ ತುಂಬಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ರಮೇಶ ಕಡೇಮನಿ ಮಾತನಾಡಿ, “ಮಾದಿಗ ಸಮುದಾಯದ ಸುದೀರ್ಘ ಹೋರಾಟದಿಂದ ಇವತ್ತು ಒಳಮೀಸಲಾತಿ ಹೋರಾಟಕ್ಕೆ ಜಯ ಸಿಕ್ಕಿದೆ. ಉತ್ತರ ಕರ್ನಾಟಕದ ಹೊಲೆ ಮಾದಿಗರು ನಾವು ಯಾವತ್ತು ಒಂದಾಗಿದ್ದೇವೆ‌‌. ದಕ್ಷಿಣ ಭಾಗದ ದಲಿತರಿಗೆ ನಾವು ಹೊಲೆ ಮಾದಿಗರ ರಾಜ್ಯ ಮಟ್ಟದ ಸಮಾವೇಶ ಮಾಡಿ ನಮ್ಮ ಶಕ್ತಿಯನ್ನು ಪ್ರದರ್ಶಿಸೋಣ” ಎಂದು ತಿಳಿಸಿದರು.

ವಿನಾಯಕ ಬಳ್ಳಾರಿ, ಆನಂದ ಶಿಂಗಾಡಿ ಒಳಮೀಸಲಾತಿ ವರದಿಯನ್ನು ಸರ್ಕಾರ ಒಪ್ಪಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಈ ಸಂದರ್ಭದಲ್ಲಿ ಪ್ರಕಾಶ ಕಾಳೆ, ವಿಜಯ ಕಲ್ಮನಿ, ಶಂಭು ಹುನಗುಂದ, ಮಂಜುನಾಥ ಗೊಂದಿಯವರ, ಶಂಭು ಕಾಳೆ, ಅಜೇಯ ಪಾಟೀಲ, ಬಸವರಾಜ ಚಲವಾದಿ, ಮೋಹನ ಚಲವಾದಿ, ಅನಿಲ ಕಾಳೆ, ಪರಶು ಕಾಳೆ, ಬಸೂ ಬಿಳೆಯಲಿ, ಶಿವಾನಂದ ತಮ್ಮಣ್ಣವರ, ಶ್ರೀಕಾಂತ ಮಳಲಿ, ಸಂತೋಷ ಬಣಕಾರ, ಸುರೇಶ ಬಣಕಾರ, ರಾಘು ಡೋಣಿ, ಗೋಪಾಲ ಕಾಳೆ, ಪ್ರವೀಣ ಬಿಳೆಯಲಿ, ಆಕಾಶ ಬಣಕಾರ, ಅಕ್ಷಯ ಬಿಳೆಯಲಿ, ಮಾರುತಿ ಗೊಟುರು, ವಿಶಾಲ ಬಣಕಾರ,ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...