ಗದಗ | ಶಾಂತಿಯುತ, ಮುಕ್ತ ಮತದಾನಕ್ಕಾಗಿ ಶಶಸ್ತ್ರ ಠೇವಣಿ: ಜಿಲ್ಲಾಧಿಕಾರಿ

Date:

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಉಪ-ಚುನಾವಣೆಗೆ ಜುಲೈ 23 ರಂದು ಮತದಾನ ಜರುಗಲಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್‌ ತಿಳಿಸಿದ್ದಾರೆ.

“ಚುನಾವಣೆ ಘೋಷಣೆ ದಿನಾಂಕದಿಂದ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳುವವರೆಗೆ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮುಂಡರಗಿ ತಾಲೂಕು 17- ಮುರಡಿ ವ, ಮುರಡಿ ತಾಂಡಾ(ಮಾರುತಿ ನಗರ), ಚಿಕ್ಕವಡ್ಡಟ್ಟಿ ಮತ್ತು ಗುಡ್ಡದ ಬೂದಿಹಾಳ ಹಾಗೂ ಡೋಣಿ ಗ್ರಾಮ ಪಂಚಾಯತಿಯ ಡೋಣಿ-1 ವ್ಯಾಪ್ತಿಯಲ್ಲಿ ಆಯುಧ ಪರವಾನಗಿ ಹೊಂದಿರುವವರು ತಮ್ಮ ಆಯುಧಗಳನ್ನು ಜೊತೆಯಲ್ಲಿ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ” ಎಂದು ಸೂಚಿಸಿದ್ದಾರೆ.

“ಆಯುಧ ಹೋದಿರುವವರು ತಮ್ಮ ಆಯುಧಗಳನ್ನು ಜುಲೈ 19 ರೊಳಗಾಗಿ ತಮ್ಮ ಸಮೀಪದ ಆರಕ್ಷಕ ಠಾಣೆಯಲ್ಲಿ ಠೇವಣಿ ಮಾಡಿ ರಶೀದಿ ಪಡೆಯಬೇಕು. ಜುಲೈ 23ರಂದು ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಉಪ ಚುನಾವಣೆ ಪ್ರಕಿಯೆ ಮುಗಿದ ಕೂಡಲೇ ಠೇವಣಿ ಮಾಡಲಾದ ಆಯುಧಗಳನ್ನು ಅವುಗಳ ವಾರಸುದಾರರಿಗೆ ಯಾವುದೇ ನಿರ್ದೇಶನಗಳಿಗೆ ಕಾಯದೇ ಪರತ ಮಾಡಬೇಕು. ಈ ಆದೇಶವು ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಿಗೆ ಹಾಗೂ ವಿವಿಧ ಹಣಕಾಸು ಸಂಸ್ಥೆಗಳ ಭದ್ರತಾ ಪಡೆಯ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಒತ್ತಾಯ

“ಜಿಲ್ಲಾ ಆಯುಧ ಠೇವಣಿ ಕುರಿತು ಜಿಲ್ಲಾ ಸ್ಕ್ರೀನಿಂಗ್ ಕಮೀಟಿ ರಚಿಸಿದ್ದು, ಸದರಿ ಆದೇಶದನ್ವಯ ಕ್ರಮ ವಹಿಸಬೇಕು. ಈ ಆದೇಶವು ಗದಗ ಜಿಲ್ಲಾ ಮುಂಡರಗಿ ತಾಲೂಕ 17- ಮುರಡಿ ವ, ಮುರಡಿ ತಾಂಡಾ (ಮಾರುತಿ ನಗರ), ಚಿಕ್ಕವಡ್ಟಟ್ಟಿ ಮತ್ತು ಗುಡ್ಡದಬೂದಿಹಾಳ ಹಾಗೂ ಡೋಣಿ ಗ್ರಾಮ ಪಂಚಾಯತಿಯ ಡೋಣಿ-1 ಗ್ರಾಮ ವ್ಯಾಪ್ತಿಗೆ ಮಾತ್ರ ಅನ್ವಯಿಸುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...