ಗದಗ | ಸಿಜೆಐ ಗವಾಯಿ ಮೇಲಿನ ದಾಳಿ ಸಂವಿಧಾನಕ್ಕೆ ಎಸಗಿದ ಅವಮಾನ: ನ್ಯಾ. ಬಾಲು ರಾಠೋಡ

Date:

ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಚಪ್ಪಲಿ ಎಸೆದ ಕೃತ್ಯವು ಸಂವಿಧಾನಕ್ಕೆ ಎಸಗಿದ ಅವಮಾನ ಎಂದು ನ್ಯಾಯವಾದಿ ಬಾಲು ರಾಠೋಡ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಅಖಿಲ ಭಾರತ ವಕೀಲರ ಒಕ್ಕೂಟ, ವಿದ್ಯಾರ್ಥಿ ಯುವಜನ, ಬೀದಿಬದಿ ವ್ಯಾಪಾರಸ್ಥರ ಹಾಗೂ ರೈತ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಬಹಿರಂಗ ನ್ಯಾಯಾಲಯದೊಳಗೆ ಚಪ್ಪಲಿ ಎಸೆದು, ಸನಾತನ ಧರ್ಮದ ಪರ ಘೋಷಣೆ ಕೂಗಿದ ಘಟನೆಯು ಅತ್ಯಂತ ಆಘಾತಕಾರಿ ಮತ್ತು ಖಂಡನೀಯವಾಗಿದೆ. ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ನಾಯಕರು ಇತ್ತೀಚೆಗೆ ಮಾಡಿದ ಜಾತಿವಾದಿ, ಮನುವಾದಿ ಮತ್ತು ಸಮುದಾಯ ವಿರೋಧಿ ಹೇಳಿಕೆಗಳು ಇಂತಹ ಕೃತ್ಯಗಳಿಗೆ ಧೈರ್ಯ ನೀಡಿವೆ. ಈ ಘಟನೆ, ಹಿಂದುತ್ವದ ಸಂಪ್ರದಾಯಪರ ಶಕ್ತಿಗಳು ಸಮಾಜದಲ್ಲಿ ಬಿತ್ತಿರುವ ಮನುವಾದಿ ಮತ್ತು ದ್ವೇಷಪೂರಿತ ವಿಷದ ಮತ್ತೊಂದು ಉದಾಹರಣೆಯಾಗಿದೆ. ಇದು ಸಂಘ ಪರಿವಾರದ ಅಸಹಿಷ್ಣುತೆ ಮತ್ತು ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದ ಯಾವುದೇ ಅಭಿಪ್ರಾಯವನ್ನು ಸಹಿಸಲಾರದ ಸ್ವಭಾವವನ್ನು ಕೂಡ ತೋರಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಟಿಯು ಜಿಲ್ಲಾ ಮುಖಂಡ ಪೀರು ರಾಠೋಡ ಮಾತನಾಡಿ, “ಮುಖ್ಯ ನ್ಯಾಯಮೂರ್ತಿ ಗವಾಯಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಅಸಹಿಷ್ಣುತೆಯನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಸರ್ಕಾರ ದೃಢವಾದ ಕ್ರಮ ಕೈಗೊಳ್ಳಬೇಕು. ಜೊತೆಗೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಕಾಪಾಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಗದಗ | ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರ ‘ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’

ಯುವ ವಕೀಲ ದಾವಲಸಾಬ ತಾಳಿಕೋಟಿ ಮಾತನಾಡಿ, “ಸಂವಿಧಾನ ಎತ್ತಿಹಿಡಿಯುವಲ್ಲಿ ಶ್ರಮಿಸುತ್ತಿರುವ ಸಿಜೆಐ ಬಿ ಆರ್ ಗವಾಯಿ ಅವರ ಮೇಲೆ ಸನಾತನವಾದಿ ವಕೀಲನೊಬ್ಬನ ಮೂಲಕ ಮಾಡಿಸಲಾದ ದಾಳಿ ಅತ್ಯಂತ ಖಂಡನೀಯ. ಸಂಘ ಪರಿವಾರದ ಉದ್ರೇಕಕಾರಿ ಮಾತುಗಳೇ ಇದರ ಹಿಂದಿನ ಕರಾಳ ಕೈವಾಡಗಳು. ಹಾಗಾಗಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ಬಂಧಿಸಲ್ಪಟ್ಟಿರುವ ವಕೀಲನ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು” ಎಂದರು.

ಈ ವೇಳೆ ಫಯಾಜ್ ತೋಟದ, ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶಾಮೀದಸಾಬ ದಿಂಡವಾಡ ಮೆಹಬೂಬ್ ಹವಾಲ್ದಾರ್, ಚಂದ್ರು ರಾಠೋಡ, ರೂಪೇಶ ಮಾಳೋತ್ತರ, ಅನ್ವರ್ ಮಾಲ್ದಾರ , ಕಳಕಪ್ಪ ಮಾಳೋತ್ತರ, ಮಹೇಶ್, ವೀರೇಶ್ ರಾಠೋಡ, ರುದ್ರಪ್ಪ ರಾಠೋಡ, ಭೀಮವ್ವ ಲಮಾಣಿ, ರಾಮವ್ವ ಪೂಜಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...