ರಾಜ್ಯದ ದಲಿತ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಯಾವು ಆಶಯಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದವೋ, ಆ ಆಶಯದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಮತೀಯವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಗದಗ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿದ ದಲಿತ ಮುಖಂಡರು, “ಗ್ರಾಮೀಣ ಅಭಿವೃದ್ದಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ವಚನ ಸಂಭ್ರಮದಲ್ಲಿ ಒಂದು ಧರ್ಮದ ಜನಾಂಗಕ್ಕೆ ಅವಕಾಶ ಕೊಟ್ಟು ವಿಧ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಿತ್ತಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಬಳಿಕ, ವಿಶ್ವಿವಿದ್ಯಾಲಯದ ವಿಸಿ ವಿಷ್ಣುಕಾಂತ ಚಟಪಲ್ಲಿ ಕರೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಯಕ್ರಮದಲ್ಲಿ ಮತೀಯವಾದ ಬಿತ್ತುವ ಕುರಿತು ತರಾಟೆಗೆ ತೆಗೆದುಕೊಂಡಿದ್ದಾರೆ. ಮತೀಯವಾದಕ್ಕೆ ಅವಕಾಶ ಕೊಡದಂತೆ ತಾಕೀತು ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ
ಈ ಸಂಧರ್ಭದಲ್ಲಿ ಬುದ್ಧನ ಪ್ರತಿಮೆ ಲಡಾಯಿ ಪ್ರಕಾಶನದ ವೈಚಾರಿಕ ವರ್ಷದ ಕಾಲೆಂಡರ್ ಮತ್ತು ವಾಣಿ ಪೆರಿಯೋಡಿಯವರು ಬರೆದ ಮಕ್ಕಳಿಗಾಗಿ ಸಂವಿಧಾನ ಪುಸ್ತಕವನ್ನು ಪ್ರಿಯಾಂಕ್ ಖರ್ಗೆಯವರಿಗೆ ನೀಡಿದರು.




