ಗದಗ | ಅನುಸೂಚಿತ ಜಾತಿ, ಬುಡಕಟ್ಟುಗಳ ಉಪಹಂಚಿಕೆ ಕಾಯ್ದೆ, ನಿಯಮಗಳ ಜಾಗೃತಿ ಕಾರ್ಯಾಗಾರ

Date:

ತಳಸಮುದಾಯದ ಜನರಿಗೆ ಸೌಲಭ್ಯಗಳ ಕುರಿತು ಮಾಹಿತಿ ತಿಳಿಸುವ ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಉಪ ಹಂಚಿಕೆ ಕಾಯ್ದೆ ಮತ್ತು ನಿಯಮಗಳ ಜಾಗೃತಿ ಕಾರ್ಯಾಗಾರ ಬಹಳ ಮುಖ್ಯ ಎಂದು ಶಿಕ್ಷಕ ರಾಮಚಂದ್ರ ಹಂಸನೂರ ಹೇಳಿದರು.

ಗದಗ ಪಟ್ಟಣದ ಚೇತನ್ ಕ್ಯಾಂಟೀನ್ ಹತ್ತಿರವಿರುವ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಜಾಗೃತಿ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ “ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಉಪಹಂಚಿಕೆ ಕಾಯ್ದೆ ಮತ್ತು ನಿಯಮಗಳ” ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ದಲಿತ ಬಹುಜನ ಚಳುವಳಿ ಮುಖಂಡ ಎಂ ವೆಂಕಟೇಶ್ ಮಾತನಾಡಿ, “ನಮ್ಮ ದಲಿತ ಸಮುದಾಯಗಳಿಗೆ ಸಾಕಷ್ಟು ಮಾಹಿತಿ ಕೊರತೆಯಿದೆ. ಹಾಗಾಗಿ ಸರಿಯಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ನೀವು ಈ ಕಾಯ್ದೆಯ ಬಗ್ಗೆ ತಿಳಿಯದೇ ಇರುವುದರಿಂದ, ಸರ್ಕಾರ ಮಟ್ಟದಲ್ಲಿ‌ ಸರಿಯಾಗಿ ಕಾಯ್ದೆಯ ನಿಯಮಗಳು ಜಾರಿಯಾಗುತ್ತಿಲ್ಲ. ಈ ಕಾಯ್ದೆಯಲ್ಲಿ ವಯಕ್ತಿಕ ಅಭಿವೃದ್ಧಿ, ಸಾಮಾಜಿಕ ವಲಯ, ಅತಿಹೆಚ್ಚು ಜನರು ಇರುವ ಕಾಲೋನಿ, ಹೀಗೆ ಎಲ್ಲ ವಲಯಗಳಲ್ಲಿ ಈ ಕಾಯ್ದೆಯ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು. ಆಗ ನಮ್ಮನ್ನು ಯಾರೂ ಮೋಸಗೊಳಿಸಲು ಬರುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪಾರ್ಕ್‌ನಲ್ಲಿ ವಾಕಿಂಗ್‌ ಮಾಡುತ್ತಲೇ ಸಾರ್ವಜನಿಕರ ಅಭಿಪ್ರಾಯ ಆಲಿಸಿದ ಶಾಸಕ ರವಿ ಗಣಿಗ

ದಲಿತ ಮುಖಂಡ ಸುರೇಶ್ ಛಲವಾದಿ ಮಾತನಾಡಿ, “ಬಡವರಿಗೆ ಸಾಕಷ್ಟು ಅನ್ಯಾಯಗಳಾಗುತ್ತಿವೆ. ಯಾರಿಗೆ ಸೌಲಭ್ಯಗಳು ಸಿಗಬೇಕು ಅವರಿಗೆ ಸಿಗುತ್ತಿಲ್ಲ. ಇದ್ದವರಿಗೆ ಈ ಸೌಲಭ್ಯಗಳು ಸಿಗುತ್ತಿವೆ. ಇಂತಹ ಕಾರ್ಯಾಗಾರಗಳ ಮೂಲಕ ನಾವೆಲ್ಲರೂ ಅರಿವು ಮೂಡಿಸಿಕೊಳ್ಳಬೇಕು” ಎಂದರು.

ಕಾರ್ಯಾಗಾರದಲ್ಲಿ ಚಂದ್ರಕಾಂತ್ ಚವ್ಹಾಣ, ಪ್ರಕಾಶ್ ಹೊಸಳ್ಳಿ, ಹಣಮಂತ ಪೂಜಾರ್, ಮಜುನಾಥ ಬುರಡಿ, ಶರೀಪ್ ಬಿಳಿಯಲಿ, ರಮೇಶ್ ಕೋಳೂರು, ಶರಣಪ್ಪ ಸಂಗನಾಳ, ಮುತ್ತು ಬಿಳಿಯಲಿ, ನಾಗಮ್ಮ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...