ಗದಗ | ಜಿ ಪರಮೇಶ್ವರ್ ರಾಜಕೀಯ ಉನ್ನತಿ ಸಹಿಸದ ಬಿಜೆಪಿ, ಶಿಕ್ಷಣ ಸಂಸ್ಥೆಗಳ ಮೇಲೆ  ಕುತಂತ್ರ ಇಡಿ ದಾಳಿ : ಸಂಜಯ್ ದೊಡ್ಡಮನಿ  ಖಂಡನೆ

Date:

“ಗೃಹ ಸಚಿವ ಜಿ ಪರಮೇಶ್ವರ್ ಅವರ ಶೈಕ್ಷಣಿಕ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತ ಇಡಿ  ದಾಳಿ ನಡೆಸಿರುವುದು ಖಂಡನೀಯ”  ಎಂದು  ಕೆಪಿಸಿಸಿ ಸದಸ್ಯರು   ಗದಗ್ ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್‌  ವಿಭಾಗ ಮಾಧ್ಯಮ ವಕ್ತಾರ ಸಂಜಯ್ ದೊಡ್ಡಮನಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ರೋಣ ಪಟ್ಟಣದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಜಿ ಪರಮೇಶ್ವರ್ ಅವರ ರಾಜಕೀಯ ಉನ್ನತಿ ಸಹಿಸದ ಕೇಂದ್ರ ಸರ್ಕಾರ  ಶೈಕ್ಷಣಿಕ ಶಿಕ್ಷಣ ಸಂಸ್ಥೆಗಳ ಮೇಲೆ ರಾಜಕೀಯ ದುರುದ್ದೇಶದಿಂದ ಅನಗತ್ಯವಾಗಿ ಇಡಿ ದಾಳಿಯನ್ನು ನಡೆಸಿದ್ದು, ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಪಡೆಸಿಕೊಳ್ಳುತ್ತಿದೆ” ಎಂದು ದೂರಿದರು.

“ಕಳೆದ 50  ವರ್ಷಗಳಿಂದ ವಿದ್ಯಾರ್ಥಿ ವಸತಿ ನಿಲಯ, ಮೆಡಿಕಲ್, ಇಂಜಿನಿಯರಿಂಗ್, ಡೆಂಟಲ್ ನರ್ಸಿಂಗ್, ಪಾಲಿಟೆಕ್ನಿಕ್ ಕಾಲೇಜ್ ಪ್ರಾರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಶ್ರಮಿಸಿದ್ದಾರೆ. ಅನೇಕ ಬಡ ವಿದ್ಯಾರ್ಥಿಗಳ  ಜೀವನಕ್ಕೂ ಭದ್ರಬುನಾದಿಯನ್ನು ಹಾಕಿದ್ದಾರೆ. ಇದೆಲ್ಲ ಕೇಂದ್ರ ಸರ್ಕಾರಕ್ಕೆ ಗೊತ್ತಿದ್ದರೂ ದುರುದ್ದೇಶದ ದಾಳಿಯನ್ನು ನಡೆಸಿದೆ. ಇದು  ಅತ್ಯಂತ ಖಂಡನೀಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಸುಪ್ರೀಂ ಕೋರ್ಟ್ ಕೂಡ ಜಾರಿ ನಿರ್ದೇಶನಾಲಯ ಮಿತಿಮೀರಿ ನಡೆದುಕೊಳ್ಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಜಾರಿ ನಿರ್ದೇಶನಾಲಯವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂಬುದು ಸ್ಪಷ್ಟಪಡಿಸುತ್ತಿದೆ. ಜಿ ಪರಮೇಶ್ವರ್ ಅವರು ರಾಜ್ಯದ ದಲಿತ ಸಮುದಾಯದ ಪ್ರಭಾವಿ ನಾಯಕರು ಸಿಎಂ ರೇಸನಲ್ಲಿರುವ  ಪ್ರಮುಖರಾಗಿದ್ದಾರೆ. ಆದ್ದರಿಂದ ಅವರ ಒಡೆತನದ ಶೈಕ್ಷಣಿಕ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮೇ 26ರಿಂದ 28ರವಗೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ

“ಜಿ ಪರಮೇಶ್ವರ್ ಅವರು ದಲಿತ ಎಂಬ ಕಾರಣಕ್ಕೆ ಈ ದಾಳಿ ನಡೆದಿದ್ದು, ಅವರನ್ನು ರಾಜಕೀಯವಾಗಿ ಮುಂದುವರೆಯಬಾರದೆಂಬ ದುರುದ್ದೇಶದಿಂದ ಕೇಂದ್ರ ಸರ್ಕಾರ ಕುತಂತ್ರದ ರಾಜಕಾರಣ ಮಾಡುತ್ತಿದೆ’ ಎಂದು ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು  ಹೇಳಿದ್ದು’ ಜಿ ಪರಮೇಶ್ವರ್ ಅವರ ಬೆನ್ನಿಗೆ ನಿಂತಿದ್ದಾರೆ. ಕೂಡಲೇ ಈ ಅಕ್ರಮ ದಾಳಿಯನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕೇಂದ್ರ ಸರ್ಕಾರದ  ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವದಾಗಿ ಸಂಜಯ್ ದೊಡ್ಡಮನಿ   ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...