ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಸ್ಪೋಟಿಸುವ ಬೆದರಿಕೆ ಇ-ಮೇಲೆ ಕರೆಯಿಂದ ನ್ಯಾಯಾಧೀಶರು, ಅಧಿಕಾರಿಗಳು, ಸಿಬ್ಬಂದಿಗಳು ಆತಂಕಗೊಂಡ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬ್ಲಾಸ್ಟ್ ಮಾಡೋದಾಗಿ ಮಹಮ್ಮದ್ ರಾಜಗುರು ಎಂಬಾತನಿಂದ ಜಿಲ್ಲಾ ನ್ಯಾಯಾಧೀಶರಿಗೆ ಇ-ಮೇಲ್ ಬಂದಿದೆ. ಮದ್ಯಾಹ್ನ ವೇಳೆಗೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಮೇಲ್ ಬಂದಿದೆ. ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಸಿಬ್ಬಂದಿಗಳು ಭಯಗೊಂಡು ಎಲ್ಲರು ನ್ಯಾಯಾಲಯದಿಂದ ಹೊರಗೆ ಬಂದಿದ್ದಾರೆ.
ಎಸ್ಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಪೊಲೀಸ್ ತಂಡ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಎಸ್ಪಿ ರೋಹನ್ ಜಗದೀಶ್ ತನಿಖೆ ನಡೆಸಿದ್ದಾರೆ.





