ಗದಗ | ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ

Date:

ನರೇಗಲ್‌ ಹೋಬಳಿಯ ಕಳಕಾಪುರ-ಮಾರನಬಸರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಎರಡೂ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ನರೇಗಲ್, ಜಕ್ಕಲಿ, ಮಾರನಬಸರಿ ಗ್ರಾಮಗಳ ಜನರು ಇದೇ ರಸ್ತೆ ಮೂಲಕ ಕಳಕಾಪುರ, ಸೂಡಿ ಮೊದಲಾದ ಗ್ರಾಮಗಳಿಗೆ ಪ್ರಯಾಣಿಸುತ್ತಾರೆ. ಸೂಡಿ, ಇಟಗಿ ಗ್ರಾಮಗಳಿಗೆ ತೆರಳಲು ಈ ರಸ್ತೆ ಅತ್ಯಂತ ಸಮೀಪ. ಆದ್ದರಿಂದ ಹಳ್ಳ ದಾಟಿಕೊಂಡೇ ಗ್ರಾಮಸ್ಥರು ಓಡಾಡುತ್ತಾರೆ.

ಮಳೆ ಜೋರಾದರೆ, ಹಳ್ಳ ತುಂಬಿ ಹರಿಯುತ್ತದೆ. ಈ ವೇಳೆ ಗ್ರಾಮಗಳ ಮಧ್ಯ ಸಂಪರ್ಕ ಕಡಿತವಾಗುತ್ತದೆ. ಈ ರಸ್ತೆ ಸಂಪರ್ಕ ಕಡಿತವಾದರೆ ಮಾರನಬಸರಿ, ಕೊಪ್ಪದ ಕ್ರಾಸ್, ನಿಡಗುಂದಿ, ಕಳಕಾಪುರ ಮಾರ್ಗದ ಮೂಲಕ 20ಕಿ.ಮೀ. ಸುತ್ತಿ ಸಾಗಬೇಕು. ಕಳಕಾಪುರ, ಮಾರನಬಸರಿ, ಜಕ್ಕಲಿ ಗ್ರಾಮಗಳ ರೈತರ ಜಮೀನುಗಳು ಇದೇ ಮಾರ್ಗದಲ್ಲಿವೆ. ಕೃಷಿ ಚಟುವಟಿಕೆಗಳಿಗಾಗಿ ರೈತರು, ಕೃಷಿ ಕಾರ್ಮಿಕರು ನಿತ್ಯ ಓಡಾಡುತ್ತಾರೆ. ಜನರ ಅನುಕೂಲಕ್ಕಾಗಿ ಹಳ್ಳಕ್ಕೆ ಸೇತುವೆ ನಿರ್ಮಿಸ ಬೇಕು ಎಂದು ಆಗ್ರಹಿಸುತ್ತಾರೆ ಗ್ರಾಮಸ್ಥರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರನಬಸರಿ-ಕಳಕಾಪುರ ರಸ್ತೆಯಲ್ಲಿ ಅಲ್ಲಲ್ಲಿ ಡಾಂಬರು ಕಿತ್ತುಹೋಗಿದೆ. ಕೆಲವೆಡೆ ಆಳವಾದ ತೆಗ್ಗುಗಳು ಬಿದ್ದಿವೆ. ನಾಲ್ಕೈದು ಕಡೆಗಳಿಂದ ಹರಿದುಬರುವ ಕಿರು ಹಳ್ಳಗಳಿಗೆ ಸಿಮೆಂಟ್‌ ಪರಸಿ ನಿರ್ಮಾಣ ಮಾಡಲಾಗಿದೆ. ಅವು ಸಹ ಬಿರುಕು ಬಿಟ್ಟಿದ್ದು, ಕೆಲವು ಕಡೆಗಳಲ್ಲಿ ಕಿತ್ತು ಹೋಗಿವೆ.

ಸಿಮೆಂಟ್ ಹಾಗೂ ಡಾಂಬರು ರಸ್ತೆ ಜೋಡಣೆ ಸರಿಯಾಗಿಲ್ಲ. ಎತ್ತರದಲ್ಲಿ ವ್ಯತ್ಯಾಸವಾಗಿ ಬೈಕ್ ಸವಾರರಿಗೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ದೂರುತ್ತಾರೆ.

ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿದ್ದು, ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆಸಹ ನಡೆದಿದೆ. ರಸ್ತೆ ದುರಸ್ತಿ, ಕಿರು ಸೇತುವೆ, ವೈಜ್ಞಾನಿಕವಾಗಿ ರಸ್ತೆ ಜೋಡಣೆ ಮಾಡಬೇಕು ಇಲ್ಲವಾದರೆ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಜೈಭೀಮ ಸೇನೆ ಎಚ್ಚರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...