ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ನೀಡಿದೆ. ಆದರೂ ಕೂಡಾ ಕೇಂದ್ರ ಬಿಜೆಪಿ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಗದಗ್ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಯ ವಿಭಾಗದ ಮಾದ್ಯಮ ವಕ್ತಾರರು ಸಂಜಯ್ ದೊಡ್ಡಮನಿ ಆರೋಪಿಸಿದ್ದಾರೆ.
ಗದಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕುವುದನ್ನು ಬಿಟ್ಟು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಹೆಣ್ಣು ಮಕ್ಕಳ ಪರವಾಗಿ ನಿಲ್ಲುವುದನ್ನು ಬಿಟ್ಟು ಇಲ್ಲಸಲ್ಲದ ಆರೋಪ ಮಾಡುತ್ತಾ ಕೂತಿದ್ದಾರೆ” ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಸವಣ್ಣ ಮಾನವ ಕುಲಕ್ಕೆ ಬೇಕಾಗಿರುವಂತಹ ವಿಶ್ವಗುರು: ಬಸವಪ್ರಭು ಸ್ವಾಮೀಜಿ
“ಕುಮಾರಸ್ವಾಮಿಯರು ಎಸ್‌ಐಟಿ ತನಿಖೆಯನ್ನೇ ದಾರಿ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿ ಕೆ ಶಿವಕುಮಾರ್ ಅವರನ್ನು ಟೀಕೆ ಮಾಡುವುದು ಸರಿಯಲ್ಲ” ಎಂದು ಹೇಳಿದರು.





