ಗದಗ | ಮಕ್ಕಳ ಕಲಿಕಾ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು: ಇಒ

Date:

ಮಕ್ಕಳ ಕಲಿಕಾ ಆಸಕ್ತಿಯನ್ನು ಗಮನಿಸಿ ಅವರ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು. ಹಾಗಾದಾಗ ಮಾತ್ರ ಮಕ್ಕಳಲ್ಲಿರುವ ಸೃಜನಶೀಲತೆಯು ಹೊರ ಬರಲು ಸಾಧ್ಯ ಎಂದು ಗದಗ ಜಿಲ್ಲೆ ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ ಎನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಗ್ರಾಮೀಣಾಭಿವೃದ್ಧಿ‌ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 21 ರಿಂದ 24ರವರೆಗೆ 3 ದಿನಗಳ ಮಕ್ಕಳ ಸಾಹಿತ್ಯ ಸಂಭ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಚಿಕ್ಕಮಣ್ಣೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲು ತೀರ್ಮಾನಿಸಿದರು.

“ಉತ್ತಮ ಸಮಾಜ ಕಟ್ಟಬೇಕೆಂದರೆ ನಾವು ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಬೇಕು. ಮಕ್ಕಳು ಚಿಕ್ಕವರಿದ್ದಾಗಲೇ ಅವರಲ್ಲಿರುವ ಪ್ರತಿಭೆ ಗುರುತಿಸಿ ಅದಕ್ಕೆ ತಕ್ಕಂತೆ ಶಿಕ್ಷಣ ಕೊಡುವುದು ನಮ್ಮ ಕರ್ತವ್ಯ. ಶಿಕ್ಷಣದ ಉದ್ದೇಶ ಸಾರ್ಥಕವಾಗಬೇಕಾದರೆ ಇಂತಹ ಕಾರ್ಯಕ್ರಮ ಅವಶ್ಯಕ. ಜತೆಗೆ ಮಕ್ಕಳಲ್ಲಿ ಅಡಗಿರುವ ಸಾಮರ್ಥ್ಯದ ಅಭಿವೃದ್ಧಿಯೂ ಆಗುತ್ತದೆ. ಮಕ್ಕಳಿಗೆ ಸೂಕ್ತವಾದ ವೇದಿಕೆ ಕಲ್ಪಿಸಿಕೊಡುವ ಕೆಲಸವಾಗಬೇಕು ಇಲ್ಲದೆ ಹೋದರೆ ಸಮಾಜಕ್ಕೆ, ರಾಷ್ಟ್ರಕ್ಕೆ ನಷ್ಟವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳ ಸರ್ವತೋಮುಖ ಕಲಿಕೆಗೆ ಪೂರಕವಾಗಿ ಕಥೆ ಕಟ್ಟೊಣ, ಕವಿತೆ ರಚಿಸೋಣ, ನಾಟಕ ರಚನೆ, ವರದಿ ಮಾಡುವಿಕೆ ಕುರಿತು ಮಕ್ಕಳಿಗೆ 3 ದಿನಗಳ ಕಾರ್ಯಾಗಾರ ಮಾಡಲಾಗುತ್ತದೆ. 100ಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಮಕ್ಕಳಲ್ಲಿರುವ ಕ್ರಿಯಾಶೀಲತೆ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡುತ್ತಾರೆ” ಎಂದು ಎಫ್ ಸಿ ಚೇಗರಡ್ಡಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನ ಜಿಲ್ಲೆಗೆ ಸಿಕ್ಕಿದೆ: ರವಿ ಬೋಸರಾಜ

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಶೀದ ಹುಣಸಿಮರದ, ಹಲವು ಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಎಸ್ ವಿ ಮಾಳವಾಡ, ಎಸ್ ಬಿ ಹಿರೇಮಠ, ಎನ್ ಆರ್ ಬೇವಿನಮರದ, ಎಸ್ ಜೆ ಹಿರೇಮಠ, ಎಲ್ ಸಿ ಮುಂಡೆವಾಡ, ಮಹೇಶಗೌಡ ಪಾಟೀಲ್, ಎಂ ಕೆ ಜಮಖಾನದ, ವಿಠ್ಠಲ ಅಬ್ಬಿಗೇರಿ, ಎಚ್ ಎನ್‌ ಭಜಂತ್ರಿ, ಸಿ ಎಸ್ ಪರಡ್ಡಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...