ಗದಗ | ತಹಸೀಲ್ದಾರ ಕಾರ್ಯಾಲಯದ ಸುತ್ತ-ಮುತ್ತಲ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

Date:

ಗಜೇಂದ್ರಗಡ ನಗರದ ತಹಸೀಲ್ದಾರರ ಕಾರ್ಯಾಲಯದ ಸುತ್ತ-ಮುತ್ತಲು ಇರುವ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಜ.7ರಂದು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ತಹಸೀಲ್ದಾರ ಕಾರ್ಯಾಲಯದ ಸುತ್ತಮುತ್ತ ಇದ್ದ ಸುಮಾರು 50ಕ್ಕೂ ಹೆಚ್ಚು ಅಂಗಡಿಗಳು ಇದ್ದು ಅವುಗಳನ್ನು ಪೊಲೀಸ್‌ ಇಲಾಖೆಯ ಭದ್ರತೆಯಲ್ಲಿ ತೆರವು ಕಾರ್ಯ ನಡೆಸಿದ್ದಾರೆ. ಕೆಲ ಅಂಗಡಿ ಮಾಲೀಕರು ತಾವಾಗಿಯೇ ಅಂಗಡಿಯ ತೆರವು ಕಾರ್ಯಕ್ಕೆ ಮುಂದಾದರೆ, ಇನ್ನೂ ಕೆಲ ಅಂಗಡಿಗಳನ್ನು ಪುರಸಭೆ ಜೆಸಿಬಿಯಿಂದ ತೆರವು ಕಾರ್ಯ ಮಾಡಲಾಯಿತು. ಈ ವೇಳೆ ಪುರಸಭೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರ ಮಧ್ಯ ವಾಗ್ವಾದ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಈ ಕುರಿತಂತೆ ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಮಾಧ್ಯಮದ ಜೊತೆ ಮಾತನಾಡಿ ತಹಸೀಲ್ದಾರರ ಕಚೇರಿಗೆ 25ಕ್ಕೂ ಹೆಚ್ಚು ಹಳ್ಳಿಯ ಜನರು ನಿತ್ಯ ಭೇಟಿ ನೀಡುತ್ತಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಬಸ್ ಸಂಚಾರಕ್ಕೆ ತೊಂದರೆಯಾದ ಹಿನ್ನಲೆಯಲ್ಲಿ ಅನಧಿಕೃತ ಅಂಗಡಿಗಳನ್ನು ತೆರವು ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...